ಬಾವಿಗೆ ಬಿದ್ದ ಅಪರೂಪದ ಕರಿ ಚಿರತೆಯ ರಕ್ಷಣೆ

01/04/2024
ದಕ್ಷಿಣ ಕನ್ನಡ: ಬಾವಿಗೆ ಬಿದ್ದ ಅಪರೂಪದ ಕರಿ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಸೆರೆ ಹಿಡಿದ ಘಟನೆ ಮಂಗಳೂರು ತಾಲೂಕಿನ ಎಡಪದವು ಸಮೀಪದ ಗೊಸ್ಪೆಲ್ ಸನಿಲ ಎಂಬಲ್ಲಿ ನಡೆದಿದೆ.
ಸನಿಲ ನಿವಾಸಿ ಶಕುಂತಲಾ ಆಚಾರ್ಯ ಎಂಬವರ ಮನೆಯ ಬಾವಿಯಲ್ಲಿ ಬೆಳಗ್ಗೆ ಕರಿಚಿರತೆ ಪತ್ತೆಯಾಗಿತ್ತು. ಇದರಿಂದ ಗಾಬರಿಗೊಂಡ ಮನೆಯವರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಬೋನು ಸಹಿತ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಕರಿಚಿರತೆಯನ್ನು ರಕ್ಷಿಸಿದ್ದಾರೆ. ಚಿರತೆ ಸೆರೆ ಬಾವಿಗೆ ಬಿದ್ದಿರುವ ಸುದ್ದಿ ಕೇಳಿ ಸ್ಥಳೀಯರು ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth