ನಡು ರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ವೊಂದು ಸುಟ್ಟು ಭಸ್ಮ

01/04/2024
ಬ್ರಹ್ಮಾವರ: ನಡು ರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ವೊಂದು ಸುಟ್ಟು ಭಸ್ಮವಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದ್ದು, ಏಕಾಏಕಿ ಬೆಂಕಿ ಹತ್ತಿಕೊಂಡ ಎಲೆಕ್ಟ್ರಿಕ್ ಸ್ಕೂಟರ್ ಹೊತ್ತಿ ಉರಿದಿದೆ. ತಕ್ಷಣವೇ ಬೆಂಕಿ ನಂದಿಸಲು ಯತ್ನಿಸಲಾಯಿತಾದರೂ ಪ್ರಯೋಜನವಾಗಿಲ್ಲ.
ಘಟನೆಯಲ್ಲಿ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ವಾಹನಕ್ಕೆ ಬೆಂಕಿ ಹತ್ತಿಕೊಳ್ಳಲು ಕಾರಣವೇನು ಎನ್ನುವುದು ತಿಳಿದು ಬಂದಿಲ್ಲ. ಮಿತಿಮೀರಿದ ಉಷ್ಣಾಂಶದಿಂದ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth