ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಜಕ್ಕಣ್ಣಕ್ಕಿ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

01/04/2024
ಚಿಕ್ಕಮಗಳೂರು : ಭರವಸೆಗಳನ್ನು ಈಡೇರಿಸದ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕು ಜಕ್ಕಣ್ಣಕ್ಕಿ ಗ್ರಾಮಸ್ಥರು ತಿಳಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯನ್ನು ಜಕ್ಕಣ್ಣಕ್ಕಿ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿದ್ದ ವೇಳೆ ಗ್ರಾಮಕ್ಕೆ ಆಗಮಿಸಿದ ತಹಶೀಲ್ದಾರ್ ಮೂಲಭೂತ ಸೌಲಭ್ಯ ಕಲ್ಪಿಸೋದಾಗಿ ಭರವಸೆಯನ್ನು ನೀಡಿದ್ದಾರೆ.
ಆದರೆ ಭರವಸೆಗಳು ಹುಸಿಯಾದ ಕಾರಣ ಈ ಸಲದ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಓಡಾಡಲು ಸರಿಯಾದ ರಸ್ತೆಯೂ ಇಲ್ಲ, ವಾಸ ಮಾಡುವ ಮನೆಗೆ ಹಕ್ಕುಪತ್ರ ಕೂಡ ಇಲ್ಲ ಎಂದು ಗ್ರಾಮಸ್ಥರು ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಈ ಗ್ರಾಮದ ಜನರಿಗೆ ರಸ್ತೆ, ಚರಂಡಿ ವ್ಯವಸ್ಥೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.