ಮೋದಿ ದೇಶದ ಜನರಿಗೆ ಸುಳ್ಳು ಹೇಳಿದ್ದಾರೆ: ಜೈರಾಮ್ ರಮೇಶ್ ಆರೋಪ - Mahanayaka
5:20 AM Wednesday 20 - August 2025

ಮೋದಿ ದೇಶದ ಜನರಿಗೆ ಸುಳ್ಳು ಹೇಳಿದ್ದಾರೆ: ಜೈರಾಮ್ ರಮೇಶ್ ಆರೋಪ

02/04/2024


Provided by

ತಮಿಳು ಸುದ್ದಿ ವಾಹಿನಿ ‘ತಂತಿ ಟಿವಿ’ಗೆ ಇತ್ತೀಚೆಗೆ ಸಂದರ್ಶನ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಜನರಿಗೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಜೈರಾಮ್ ರಮೇಶ್, “ಚುನಾವಣಾ ಬಾಂಡ್ ಯೋಜನೆಯನ್ನು ಸಂಪೂರ್ಣವಾಗಿ ಅನಾಮಧೇಯವಾಗಿರುವಂತೆ ರೂಪಿಸಲಾಗಿತ್ತು. ರಾಜಕೀಯ ಪಕ್ಷಗಳಿಗೆ ನಿಧಿಯು ಎಲ್ಲಿಂದ ಬಂತು ಹಾಗೂ ಅದನ್ನು ಹೇಗೆ ಬಳಸಿಕೊಳ್ಳಲಾಯಿತು ಎಂಬ ವಿವರಗಳನ್ನು ಸಾರ್ವಜನಿಕರಿಂದ ಮುಚ್ಚಿಡುವುದು ಪ್ರಧಾನಿ ಮೋದಿಗೆ ಬೇಕಿತ್ತು” ಎಂದು ಆರೋಪಿಸಿದ್ದಾರೆ.
ಆರು ವರ್ಷಗಳಲ್ಲಿ ಯಾವ ಪಕ್ಷಕ್ಕೆ ಯಾರು ದೇಣಿಗೆ ನೀಡಿದ್ದಾರೆಂಬ ಒಂದು ವಿವರವೂ ಸಾರ್ವಜನಿಕವಾಗಿ ಬಹಿರಂಗಪಡಿಸಲಾಗಿರಲಿಲ್ಲ ಎಂದೂ ಅವರು ದೂರಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ