ಪೊಳ್ಳು ಹಿಂದುತ್ವವಾದಿಗಳಿಂದ ನಮಗೆ ಪಾಠ ಬೇಡ: ಈಶ್ವರಪ್ಪಗೆ ಬಿ.ವೈ.ರಾಘವೇಂದ್ರ ಟಾಂಗ್ - Mahanayaka

ಪೊಳ್ಳು ಹಿಂದುತ್ವವಾದಿಗಳಿಂದ ನಮಗೆ ಪಾಠ ಬೇಡ: ಈಶ್ವರಪ್ಪಗೆ ಬಿ.ವೈ.ರಾಘವೇಂದ್ರ ಟಾಂಗ್

ragavendra
02/04/2024


Provided by

ಬೈಂದೂರು: ಪೊಳ್ಳು ಹಿಂದುತ್ವವಾದಿಗಳಿಂದ ನಮಗೆ ಪಾಠ ಬೇಡ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು, ಕೆ.ಎಸ್.ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಬೈಂದೂರಿನ ನಾಗೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುತ್ವದವಾದ ವಿಚಾರದಲ್ಲಿ ನಮ್ಮ ಮೈಯಲ್ಲಿ ಹರಿಯುತ್ತಿರುವ ಒಂದೊಂದು ಹನಿ ರಕ್ತವೂ ಹಿಂದೂ ಆಗಿದೆ. ಪೊಳ್ಳು ಹಿಂದುತ್ವವಾದಿಗಳಿಂದ ನಮಗೆ ಪಾಠ ಬೇಡ ಎಂದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಾನೇ ಬಿಜೆಪಿ ಅಭ್ಯರ್ಥಿ ಎನ್ನುವುದನ್ನು ಪಕ್ಷವೇ ಅಧಿಕೃತವಾಗಿ ಘೋಷಿಸಿದೆ. ಇಡೀ ಬಿಜೆಪಿ, ಪರಿವಾರ ನಮ್ಮ ಜೊತೆಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ನಾವು ಹಿಂದುತ್ವ ಪ್ರದರ್ಶಿಸುವವರಲ್ಲ, ಪ್ರಚಾರಕ್ಕಾಗಿ ಹಿಂದುತ್ವ ಪ್ರದರ್ಶನ ಮಾಡುವ ಅವಶ್ಯಕತೆಯೂ ನಮಗಿಲ್ಲ ಎಂದು ಇದೇ ವೇಳೆ ಪರೋಕ್ಷವಾಗಿ ಈಶ್ವರಪ್ಪನವರಿಗೆ ಟಾಂಗ್ ನೀಡಿದರು.

ಎರಡು ವಾರಗಳ ಹಿಂದೆ ಈಶ್ವರಪ್ಪ ಶಿಕಾರಿಪುರಕ್ಕೆ ಬಂದಿದ್ದಾಗ 5 ಲಕ್ಷಕ್ಕೂ ಅಧಿಕ ಮತದ ಅಂತರದಲ್ಲಿ ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ಹೇಳಿದ್ದರು. ಕೇವಲ ಎರಡು ವಾರದ ಅಂತದಲ್ಲಿ ಈಗ ಬದಲಾವಣೆ ಯಾಕಾಯ್ತು? ಎಂದು ಇದೇ ವೇಳೆ ಅವರು ಪ್ರಶ್ನಿಸಿದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ