ಸ್ನೇಹಿತೆಯನ್ನು ಭೇಟಿ ಮಾಡಿ ಹಿಂದಿರುಗುತ್ತಿದ್ದ ಯುವಕನ ಬರ್ಬರ ಹತ್ಯೆ: 10 ಮಂದಿ ಆರೋಪಿಗಳ ಬಂಧನ
ಸ್ನೇಹಿತೆಯನ್ನು ಭೇಟಿ ಮಾಡಿ ಹಿಂದಿರುಗುತ್ತಿದ್ದ ವೇಳೆ ವಲಸೆ ಕಾರ್ಮಿಕನನ್ನು ಹೊಡೆದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ.
ಮೃತರನ್ನು ಅರುಣಾಚಲ ಪ್ರದೇಶದ ಅಶೋಕ್ ದಾಸ್ ಎಂದು ಗುರುತಿಸಲಾಗಿದೆ. ಅಶೋಕ್ ದಾಸ್ ಎರ್ನಾಕುಲಂನ ಸ್ಥಳೀಯ ರೆಸ್ಟೋರೆಂಟ್ ನಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದ.
ಈತ ತನ್ನ ಸ್ನೇಹಿತೆಯ ಮನೆಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ವೇಳೆ 10 ಜನರ ಗುಂಪೊಂದು ಮೂವಾಟ್ಟುಪುಳದಲ್ಲಿ ಹಲ್ಲೆ ನಡೆಸಿ ಕಂಬಕ್ಕೆ ಕಟ್ಟಿಹಾಕಿ ದಾರುಣವಾಗಿ ಹತ್ಯೆ ಮಾಡಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ “ಸಂತ್ರಸ್ತನನ್ನು ಜನರ ಗುಂಪೊಂದು ಹೊಡೆದು ಕೊಂದಿರುವುದು ದೃಢಪಟ್ಟಿದೆ ಮತ್ತು ನಾವು ಘಟನೆಗೆ ಸಂಬಂಧಿಸಿದಂತೆ 10 ಜನರನ್ನು ಬಂಧಿಸಿದ್ದೇವೆ” ಎಂದರು.
ಘಟನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಿಸಿದ ಪೋಲಿಸರು ವಲಸೆ ಕಾರ್ಮಿಕನ ಹತ್ಯೆಯಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಸಾಧ್ಯತೆ ಇದೆ, ಮೃತ ಅಶೋಕ್ ದಾಸ್ ಯೂಟ್ಯೂಬರ್ ಕೂಡ ಆಗಿದ್ದ ಎನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth




























