ಪ್ರತಿಭಟನೆ ನಡೆಸುತ್ತಿದ್ದ ಟಿಎಂಸಿ ನಾಯಕರು ಅರೆಸ್ಟ್: ರಾಜ್ಯಪಾಲರನ್ನು ಭೇಟಿ ಮಾಡಿದ ತೃಣಮೂಲ ಕಾಂಗ್ರೆಸ್

ಭಾರತದ ಚುನಾವಣಾ ಆಯೋಗದ (ಇಸಿಐ) ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಪಕ್ಷದ ನಾಯಕರನ್ನು ದೆಹಲಿಯಲ್ಲಿ ಬಂಧಿಸಿದ ನಂತರ ಅಭಿಷೇಕ್ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ನ 11 ಸದಸ್ಯರ ನಿಯೋಗವು ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಅವರನ್ನು ಭೇಟಿ ಮಾಡಿತು.
ಟಿಎಂಸಿ ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ಖಂಡಿಸಿದ ಅಭಿಷೇಕ್ ಬ್ಯಾನರ್ಜಿ, ಮಹಿಳಾ ಸಂಸದರು ಮತ್ತು ನಾಯಕರನ್ನು ಈ ರೀತಿ ಎಳೆದು ತಂದಿರುವುದು ಪ್ರಜಾಪ್ರಭುತ್ವದ ಸಾವು ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೆಹಲಿಯಲ್ಲಿ ನಡೆದ ಘಟನೆಗೆ ಭಾರತದ ಚುನಾವಣಾ ಆಯೋಗವೇ ಹೊಣೆ ಎಂದು ಹೇಳಿದ ಅವರು, “ನಮ್ಮ ನಾಯಕರು ಶಾಂತಿಯುತವಾಗಿ ಕುಳಿತಿದ್ದರು. ಅವರ ಬಳಿ ಶಸ್ತ್ರಾಸ್ತ್ರಗಳಿದ್ದವೇ..? ಎಂದು ಪ್ರಶ್ನಿಸಿದರು.
ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರ ತನಿಖಾ ದಳ (ಸಿಬಿಐ), ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮತ್ತು ಆದಾಯ ತೆರಿಗೆ ಇಲಾಖೆಯ ಮುಖ್ಯಸ್ಥರನ್ನು ಬದಲಾಯಿಸುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದ ಟಿಎಂಸಿ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು.
ಸರ್ಕಾರವು ತನ್ನ ಕೆಲಸವನ್ನು ಮಾಡಲು ಮತ್ತು ಚಂಡಮಾರುತದಿಂದ ನಾಶವಾದ ಜಲ್ಪೈಗುರಿಯಲ್ಲಿ ಮನೆಗಳನ್ನು ಪುನರ್ ನಿರ್ಮಿಸಲು ಅವಕಾಶ ನೀಡುವಂತೆ ಒತ್ತಾಯಿಸಲು ನಾವು ಇಸಿಐಗೆ ಹೋದೆವು. ನಾವು ಅನುಮೋದನೆಗಾಗಿ ಹೋದೆವು. ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿದೆ, ಆದ್ದರಿಂದ ನಾವು ಅಲ್ಲಿಗೆ ಹೋದೆವು. ಎಂಟು ದಿನಗಳು ಕಳೆದಿವೆ, ಆದರೆ ಅವರು ಅದನ್ನು ನಮಗೆ ನೀಡಿಲ್ಲ” ಎಂದು ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth