ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ 'ಪೊಗರು' ಕರಗಿಸಿದ ಬ್ರಾಹ್ಮಣ ಸಂಘಟನೆಗಳು - Mahanayaka

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಕರಗಿಸಿದ ಬ್ರಾಹ್ಮಣ ಸಂಘಟನೆಗಳು

24/02/2021


Provided by

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಪೊಗರು ಚಿತ್ರದಲ್ಲಿ ಬ್ರಾಹ್ಮಣರಿಗೆ ಅವಮಾನ ಮಾಡಲಾಗಿದೆ ಎಂಬ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಬ್ರಾಹ್ಮಣ ಸಂಘಟನೆಗಳು ಚಿತ್ರ ತಂಡದ ಪೊಗರು ಕರಗಿಸಿದ್ದಾರೆ.

ಫೆ.19ರಂದು ತೆರೆಕಂಡ ಪೊಗರು ಚಿತ್ರದಲ್ಲಿ ಕೆಲವು ದೃಶ್ಯಗಳು ಬ್ರಾಹ್ಮಣರಿಗೆ ಅವಮಾನ ಮಾಡುತ್ತಿದೆ ಎಂದು ಆಕ್ಷೇಪಿಸಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಕೆಲವು ಮಾಧ್ಯಮಗಳು ಕೂಡ ಬ್ರಾಹ್ಮಣ ಸಮುದಾಯದ ಪರವಾಗಿ ನಿಂತವು. ಇದರಿಂದಾಗಿ ಇದೊಂದು ದೊಡ್ಡ ವಿವಾದವಾಗಿ ಮಾರ್ಪಟ್ಟಿತು.

ಇದೀಗ ಚಿತ್ರದ ವಿವಾದಿತ ದೃಶ್ಯಗಳಿಗೆ ಕತ್ತರಿ ಹಾಕಿ ಪ್ರದರ್ಶಿಸಲಾಗಿದ್ದು,  ಇದರ ಬೆನ್ನಲ್ಲೇ ಧ್ರುವ ಸರ್ಜಾ ಬ್ರಾಹ್ಮಣರ ಕ್ಷಮೆ ಯಾಚಿಸಿದ್ದಾರೆ.  ‘ನಮ್ಮ ಇಡೀ ಕುಟುಂಬ ಹನುಮಭಕ್ತರು. ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ಧತಿಯನ್ನು ಆಚರಿಸುತ್ತಾ, ಗೌರವಿಸುತ್ತಾ ಬದುಕುತ್ತಿದ್ದೇವೆ. ತಾತನವರ ಕಾಲದಿಂದಲೂ ಹಿಂದೂತ್ವದ ಪ್ರತಿಪಾದಕರಾಗಿಯೇ ಬದುಕಿದ್ದೇವೆ. ಕಲೆಯೇ ಧರ್ಮ, ನಾವು ಎಲ್ಲ ಧರ್ಮಗಳನ್ನು ಗೌರವಿಸಿದ್ದೇವೆ. ಚಿತ್ರದ ಕತೆ, ಪಾತ್ರಪೋಷನೆಯಲ್ಲಿ ಯಾವುದೇ ಸಮುದಾಯಕ್ಕೆ ನೋವಾಗಿದೆ ಎನ್ನುವಂತಹ ಮಾತು ನಿಜಕ್ಕೂ ನಮ್ಮ ತಂಡಕ್ಕೆ ಬೇಸರ ತಂದಿದೆ. ಈ ಕಾರಣಕ್ಕಾಗಿಯೇ ಬೇಷರತ್ ಕ್ಷಮೆ ಕೇಳುತ್ತೇನೆ.’ ನನ್ನ ಮನವಿಯನ್ನು ಪುರಸ್ಕರಿಸಿ, ಎಂದಿನಂತೆ ನಿಮ್ಮ ಆಶೀರ್ವಾದ ಇರಲಿ ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ