ಅಂಬೇಡ್ಕರ್ ಜಯಂತಿಗೆ “ಜೈ ಭೀಮ್” ಶಾಲು ಧರಿಸಿ ಆಗಮಿಸಿದ ಯತ್ನಾಳ್ - Mahanayaka

ಅಂಬೇಡ್ಕರ್ ಜಯಂತಿಗೆ “ಜೈ ಭೀಮ್” ಶಾಲು ಧರಿಸಿ ಆಗಮಿಸಿದ ಯತ್ನಾಳ್

yathnal
14/04/2024


Provided by

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಅಂಗವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಹಾಗೂ ಬಿಜೆಪಿ ಕಾರ್ಯಕರ್ತರು “ಜೈಭೀಮ್” ಶಾಲು ಧರಿಸಿ ಅಂಬೇಡ್ಕರ್ ಜಯಂತಿ ಆಚರಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಇದೇ ವೇಳೆ ನಮನ ಸಲ್ಲಿಸಿದರು. ಇದೇ ವೇಳೆ ಸಂವಿಧಾನದ ಪ್ರತಿಯನ್ನು ಪ್ರದರ್ಶಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.

ಈ ವೇಳೆ ಯತ್ನಾಳ್ ಗೆ ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಸಾಥ್ ನೀಡಿದರು.

 

ಇನ್ನೂ ಯತ್ನಾಳ್ ಸೇರಿದಂತೆ ಎಲ್ಲ ಮುಖಂಡರು, ಕಾರ್ಯಕರ್ತರು ನೀಲಿ ಶಾಲು ಧರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ವಿಶೇಷವಾಗಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ