ಕುಸಿದ ನಿರ್ಮಾಣ ಹಂತದ ಸೇತುವೆ: ಕಾರ್ಮಿಕರಿಗೆ ಗಾಯ

ಪುತ್ತೂರು: ನಿರ್ಮಾಣ ಹಂತದಲ್ಲಿರುವ ಸೇತುವೆಯ ಸ್ಲಾಬ್ ಕುಸಿದು ಕಾರ್ಮಿಕರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರೆಂಜ ಎಂಬಲ್ಲಿ ನಡೆದಿದೆ.
ಪುಣಚದ ಬರೆಂಜ, ನಿಡ್ಯಾಳ, ಕುರುಡಕಟ್ಟೆ ಮೂಲಕ ಬಲ್ನಾಡು ರಸ್ತೆಯ ಬರೆಂಜದಲ್ಲಿರುವ ತೋಡಿಗೆ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಸೋಮವಾರ ಸೇತುವೆಯ ಸ್ಲಾಬ್ ಹಾಕುವ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನೆ ವೇಳೆ ಸುಮಾರು 20 ಮಂದಿ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು. ಈ ಸಂದರ್ಭದಲ್ಲಿ ಸ್ಲಾಬ್ ಕುಸಿದು ಬಿದ್ದಿದ್ದು, ಅದರಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth