ಹಿರಿಯ ನಟ ದ್ವಾರಕೀಶ್ ಹೃದಯಾಘಾತದಿಂದ ನಿಧನ - Mahanayaka

ಹಿರಿಯ ನಟ ದ್ವಾರಕೀಶ್ ಹೃದಯಾಘಾತದಿಂದ ನಿಧನ

dhwarakish
16/04/2024


Provided by

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇಂದು ನಿಧನರಾಗಿದ್ದು, ಅವರಿಗೆ 81 ವರ್ಷ ವಯಸ್ಸಾಗಿತ್ತು.  ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ ದ್ವಾರಕೀಶ್ ಅವರ ನಿಧನ ಚಿತ್ರರಂಗಕ್ಕೆ  ಆಘಾತವನ್ನುಂಟು ಮಾಡಿದೆ.

ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರಿಗೆ  ಹೃದಯಾಘಾತ ಆಗಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ  ‘ಕುಳ್ಳ’ ಎಂದೇ ಕರೆಸಿಕೊಳ್ಳುತ್ತಾ, ಕಾಲಿಟ್ಟ ದ್ವಾರಕೀಶ್ ಅವರು ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಸಾಧನೆ ಮಾಡಿದ್ದರು. ವೀರ ಸಂಕಲ್ಪ ಎನ್ನುವುದು ಅವರ ಮೊದಲ ನಿರ್ಮಾಣದ ಸಿನಿಮಾವಾಗಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ