ಕುಮಾರಸ್ವಾಮಿಗೆ ಶಾಕ್ ನೀಡಿದ ಸುಮಲತಾ ಅಂಬರೀಶ್: ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ

ಬೆಂಗಳೂರು: ಮಂಡ್ಯದಲ್ಲಿ ಬದಲಾದ ರಾಜಕೀಯ ಸನ್ನಿವೇಶ ಇದೀಗ ತೀವ್ರ ಕುತೂಹಲ ಸೃಷ್ಟಿಸಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡರ (ಸ್ಟಾರ್ ಚಂದ್ರು) ಪರ ದರ್ಶನ್ ಇಂದು ಪ್ರಚಾರ ನಡೆಸಿದ್ದಾರೆ.
ಮಂಡ್ಯ ಕ್ಷೇತ್ರದಲ್ಲಿ ಗೆಲುವಿನ ಕನಸು ಹೊತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇದು ಬಿಗ್ ಶಾಕ್ ನೀಡಿದಂತಾಗಿದೆ. ಸುಮಲತಾ ಅವರು ಏನು ಹೇಳಿದರೂ ಮಾಡುತ್ತೇನೆ ಎಂದು ದರ್ಶನ್ ಈ ಹಿಂದೆ ಹೇಳಿಕೆ ನೀಡಿದ್ದರು, ಇದೀಗ ಟಿಕೆಟ್ ಕೈ ತಪ್ಪಿಸಿದ ಕುಮಾರಸ್ವಾಮಿ ವಿರುದ್ಧ ಪ್ರಚಾರಕ್ಕೆ ದರ್ಶನ್ ಅವರನ್ನು ಸುಮಲತಾ ಕಣಕ್ಕೀಳಿಸಿದ್ರಾ? ಎನ್ನುವ ಪ್ರಶ್ನೆಗಳು ಕೇಳಿ ಬಂದಿದೆ.
ಬಿಜೆಪಿ—ಜೆಡಿಎಸ್ ಮೈತ್ರಿಯಿಂದಾಗಿ ಸುಮಲತಾ, ಬಿಜೆಪಿ ಟಿಕೆಟ್ ಕಳೆದುಕೊಂಡರು. ಆ ಬಳಿಕ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡು ಅಚ್ಚರಿ ಮೂಡಿಸಿದ್ದ ಅವರು ಅವರು ಈ ಬಾರಿ ತಾನು ಚುನಾವಣೆಯಿಂದ ಹಿಂದೆ ಸರಿಯುವುದಾಗಿ ಹೇಳಿಕೆ ನೀಡಿದ್ದರು.
ಬಿಜೆಪಿಗೆ ಸೇರ್ಪಡೆಗೊಂಡರೂ ಸುಮಲತಾ ಅವರು ಕುಮಾರಸ್ವಾಮಿ ಪರವಾಗಿ ಪ್ರಚಾರಕ್ಕೆ ಹೋಗಿರಲಿಲ್ಲ, ಈ ನಡುವೆ ಸುಮಲತಾ ಅವರಿಗೆ ಬೆನ್ನೆಲುಬಾಗಿ ನಿಂತಿದ್ದ ನಟ ದರ್ಶನ್ ಇದೀಗ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಧುಮುಕಿದ್ದು, ಟಿಕೆಟ್ ಕೈತಪ್ಪಿಸಿದ ಕುಮಾರಸ್ವಾಮಿಗೆ ಸುಮಲತಾ ಈ ಮೂಲಕ ಉತ್ತರ ನೀಡಿದರೆ, ಅನ್ನುವ ಶಂಕೆ ಮೂಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth