ತಳ್ಳುವ ಗಾಡಿಯಿಂದ ಖರೀದಿಸಿದ ಐಸ್ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅಸ್ವಸ್ಥಗೊಂಡು ಸಾವು!

ಮಂಡ್ಯ: ಅವಳಿ ಮಕ್ಕಳು ಐಸ್ ಕ್ರೀಂ ತಿಂದ ಬಳಿಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ತ್ರಿಶುಲ್ ಹಾಗೂ ತ್ರಿಶ ಮೃತಪಟ್ಟ ಮಕ್ಕಳು ಎಂದು ಗುರುತಿಸಲಾಗಿದೆ. ಇವರಿಬ್ಬರು ಪೂಜಾ ಹಾಗೂ ಪ್ರಸನ್ನ ದಂಪತಿಯ ಮಕ್ಕಳು ಎಂದು ವರದಿಯಾಗಿದೆ.
ನಿನ್ನೆ ಮಧ್ಯಾಹ್ನ ತಳ್ಳುವ ಗಾಡಿಯಾತನಿಂದ ತಾಯಿ ಮಕ್ಕಳಿಗೆ ಐಸ್ ಕ್ರೀಂ ಕೊಡಿಸಿದ್ದರು. ಐಸ್ ಕ್ರೀಂ ತಿಂದ ಬಳಿಕ ಮಕ್ಕಳು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇದೇ ಗ್ರಾಮದ ಇತರ ಮಕ್ಕಳು ಕೂಡ ಐಸ್ ಕ್ರೀಂ ತಿಂದಿದ್ದರು. ಆದರೆ, ಬೇರೆ ಯಾರಿಗೂ ಯಾವುದೇ ಅಪಾಯವಾಗಿಲ್ಲ ಎಂದು ಹೇಳಲಾಗಿದೆ. ಅವಳಿ ಮಕ್ಕಳ ಸಾವಿಗೆ ಕಾರಣ ಏನು ಎನ್ನುವುದು ಮರಣೋತ್ತರ ಪರೀಕ್ಷೆಯ ಬಳಿಕ ತಿಳಿದು ಬರಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth