ತೆಂಗಿನ ಮರಕ್ಕೆ ಬಡಿದ ಸಿಡಿಲು: ಧಗಧಗನೆ ಹೊತ್ತಿ ಉರಿದ ತೆಂಗಿನ ಮರ

19/04/2024
ಚಿಕ್ಕಮಗಳೂರು: ರಾತ್ರಿ ವೇಳೆ ಸಿಡಿಲು ಬಡಿದ ಪರಿಣಾಮ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು—ಕೊಪ್ಪ ರಸ್ತೆಯಲ್ಲಿ ನಡೆದಿದೆ.
ಕೊಪ್ಪ ರಸ್ತೆಯ ಇಸಾಕ್ ಎಂಬುವರ ಮನೆಯ ತೆಂಗಿನ ಮರಕ್ಕೆ ಸಿಡಿಲು ಬಡಿದಿದ್ದು, ಮರ ಧಗಧಗನೆ ಉರಿದಿದೆ. ತೆಂಗಿನ ಮರ ಹೊತ್ತಿ ಉರಿಯುತ್ತಿರುವ ದೃಶ್ಯವನ್ನು ಸ್ಥಳೀಯರು ಸೆರೆ ಹಿಡಿದಿದ್ದಾರೆ.
ಸಿಡಿಲು ಬಡಿದ ಪರಿಣಾಮ ತೆಂಗಿನ ಮರ ಸಂಪೂರ್ಣ ಹೊತ್ತಿ ಉರಿದಿದೆ. ಕಳೆದ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸುತ್ತಮುತ್ತ ಗಾಳಿ–ಮಳೆ ಕಾಣಿಸಿಕೊಂಡಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth