ತಂಪೆರೆದ ಮಳೆರಾಯ: ಸಿಡಿಲು ಬಡಿದು ಓರ್ವ ರೈತ ಸಾವು

20/04/2024
ಬೆಂಗಳೂರು: ಬಿಸಿಲಿನ ಧಗೆಯಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಇದರ ಬೆನ್ನಲ್ಲೇ ಮೊದಲ ಮಳೆಗೆ ಶಿವಮೊಗ್ಗದಲ್ಲಿ ಓರ್ವ ರೈತ ಬಲಿಯಾಗಿದ್ದಾನೆ.
ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟ ರೈತನನ್ನು ರಾಕೇಶ್ ಎಂದು ಗುರುತಿಸಲಾಗಿದೆ.
ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಸಿಡಿಲು ಬಡಿದು ರಾಕೇಶ್ ಕೊನೆಯುಸಿರೆಳೆದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth