ಪ್ರಧಾನಿ ಮೋದಿಗೆ ಚೊಂಬು ಪ್ರದರ್ಶಿಸಲು ಯತ್ನಿಸಿದ ನಲಪಾಡ್ ಪೊಲೀಸ್ ವಶಕ್ಕೆ! - Mahanayaka

ಪ್ರಧಾನಿ ಮೋದಿಗೆ ಚೊಂಬು ಪ್ರದರ್ಶಿಸಲು ಯತ್ನಿಸಿದ ನಲಪಾಡ್ ಪೊಲೀಸ್ ವಶಕ್ಕೆ!

nalapad
20/04/2024


Provided by

ಬೆಂಗಳೂರು: ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದು, ಈ ವೇಳೆ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೊಂಬು ಪ್ರದರ್ಶಿಸಲು ಯತ್ನಿಸಿದ ಘಟನೆ ನಡೆಯಿತು.

ಪ್ರಧಾನಿ ಮೋದಿ ಬೆಂಗಳೂರಿನ ಮೇಖ್ರಿ ಸರ್ಕಲ್​ ಬಳಿಯ HQTCಯಿಂದ ತೆರಳುತ್ತಿದ್ದ ವೇಳೆ ಈ ವೇಳೆ ತಕ್ಷಣವೇ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದು, ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ಚೊಂಬು ನೀಡಿದೆ ಎಂಬ ಅರ್ಥದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಇದರ ಭಾಗವಾಗಿ ಪ್ರಧಾನಿ ಮೋದಿಗೆ ಕೂಡ ಚೊಂಬು ಪ್ರದರ್ಶನಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ ಎನ್ನಲಾಗಿದೆ.

ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿತ್ತು.  ಬಂದೋಬಸ್ತ್​​ಗಾಗಿ ನಾಲ್ವರು ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹೆಡ್​ ಕಾನ್ಸ್​ಟೇಬಲ್​, ಪೊಲೀಸ್​ ಪೇದೆ, ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.

ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್ , ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿತ್ತು.  ಪೊಲೀಸರು ತಕ್ಷಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಳ್ಳುವ ಮೂಲಕ ಭದ್ರತಾ ಲೋಪವಾಗದಂತೆ ಎಚ್ಚರಿಕೆ ವಹಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ