ಪಕ್ಷ ಸೂಚಿದರೆ ಕುಮಾರಸ್ವಾಮಿ ಪರ ಪ್ರಚಾರ: ಸುಮಲತಾ ಅಂಬರೀಶ್

ಮಂಡ್ಯ: ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಅವರು ಶನಿವಾರ ಬೆಂಬಲ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ವಾರದ ಹಿಂದೆಯಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ. ಪಕ್ಷ ಸೂಚಿದರೆ, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ. ಕುಮಾರಸ್ವಾಮಿಯವರಿಗೆ ಸಂಪೂರ್ಣ ಸಹಕಾರವಿದೆ ಎಂದು ಹೇಳಿದರು.
ನಾನು ಗೆದ್ದ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೇನೆ. ಗೆದ್ದ ಸ್ಥಾನವನ್ನು ಯಾರೂ ಬಿಟ್ಟುಕೊಡುವುದಿಲ್ಲ. ಸ್ಥಾನ ಬಿಟ್ಟುಕೊಟ್ಟು ಬಿಜೆಪಿ ಸೇರ್ಪಡೆಯಾಗಿದ್ದೇನೆಂದರೆ ಎನ್’ಡಿಎ ಅಭ್ಯರ್ಥಿ ಪರವಾಗಿದ್ದೇನೆ ಎಂದೇ ಅರ್ಥ ಎಂದು ತಿಳಿಸಿದರು.
ಬಳಿಕ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಪ್ರಚಾರ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿ, ಯಾರನ್ನು ಬೆಂಬಲಿಸಬೇಕು ಎಂಬುದು ಅವರಿಗೆ ಬಿಟ್ಟ ವಿಚಾರ ಎಂದರು.
ಅವರಿಗೆ ಬೆಂಬಲಿಸಿದವರ ಪರವಾಗಿ ದರ್ಶನ್ ನಿಂತಿದ್ದಾರೆ. ನನ್ನೊಂದಿಗೆ ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ನಾನು ಅವರಿಗ ಹೇಳುವುದಿಲ್ಲ. ನಾನು ಅಭ್ಯರ್ಥಿಯಾಗಿದ್ದಾಗಲೂ ಅವರನ್ನು ಪ್ರಚಾರಕ್ಕೆ ಕರೆದಿರಲಿಲ್ಲ. ಅವರೇ ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದರು. ಸುಮಮ್ಮ ಏನು ಕೆಲಸ ಹೇಳುತ್ತಾರೋ ಅದನ್ನೇ ಮಾಡುತ್ತೇನೆ ಎಂದು ದರ್ಶನ್ ಹೇಳಿದ್ದರು. ಇದು ನನ್ನ ವಿಷಯದಲ್ಲಿ ಮಾತ್ರವೇ ಹೊರತು ಬೇರೆಯವರ ವಿಷಯದಲ್ಲಿ ಅಲ್ಲ ಎಂದು ಸ್ಪಷ್ಟಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth