ಅಮಾನವೀಯ ಘಟನೆ: ಪತ್ನಿಯನ್ನು ಮಂಚಕ್ಕೆ ಕಟ್ಟಿ ಬೆಂಕಿ ಹಚ್ಚಿದ ಪತಿ: ಅವಳಿ ಮಕ್ಕಳ ಸಹಿತ ಗರ್ಭಿಣಿ ಸಾವು
ಅಮೃತಸರ: ಪತಿಯೋರ್ವ ತನ್ನ ಗರ್ಭಿಣಿ ಪತ್ನಿಯನ್ನು ಮಂಚಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿ, ಸಜೀವ ದಹನ ಮಾಡಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಅಮೃತಸರದಲ್ಲಿ ನಡೆದಿದ್ದು, ಪರಿಣಾಮವಾಗಿ ಪತ್ನಿ ಹಾಗೂ ಆಕೆಯ ಗರ್ಭದಲ್ಲಿದ್ದ ಅವಳಿ ಶಿಶುಗಳು ದಾರುಣವಾಗಿ ಸಾವನ್ನಪ್ಪಿವೆ.
ಶುಕ್ರವಾರ ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದಿತ್ತು. ಜಗಳ ತಾರಕಕ್ಕೇರಿದ ವೇಲೆ ಪತಿ ಸುಖದೇವ್ ಪತ್ನಿ ಪಿಂಕಿಗೆ ಹಲ್ಲೆ ನಡೆಸಿ, ಮಂಚಕ್ಕೆ ಕಟ್ಟಿ ಹಾಕಿದ್ದು, ಬಳಿಕ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಎರಡು ವರ್ಷಗಳ ಹಿಂದೆಯಷ್ಟೇ ಇವರಿಬ್ಬರಿಗೂ ವಿವಾಹವಾಗಿತ್ತು. ಸದ್ಯ ಪಿಂಕಿ 6 ತಿಂಗಳ ಗರ್ಭಿಣಿಯಾಗಿದ್ದಳು. ಪತಿ ಪತ್ನಿಯ ನಡುವೆ ಇತ್ತೀಚೆಗೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಈ ಘಟನೆ ಅತ್ಯಂತ ಭೀಕರವಾಗಿದ್ದು, ಪತಿ ಸುಖದೇವ್ ನ ಅಮಾನವೀಯ ಕೃತ್ಯದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ರಾಷ್ಟ್ರೀಯ ಮಹಿಳಾ ಆಯೋಗ ಘಟನೆಯನ್ನು ಖಂಡಿಸಿ, ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ಪಂಜಾಬ್ ಪೊಲೀಸರಿಂದ ಘಟನೆಯ ಸಂಪೂರ್ಣ ವರದಿ ಕೇಳಿದೆ.
ಘಟನೆಯ ಬಳಿಕ ಪರಾರಿಯಾಗಿದ್ದ ಪಾಪಿ ಸುಖದೇವ್ ನನ್ನು ನಿನ್ನೆ ಸಂಜೆ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth




























