ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಸಂಸದ ಅಮಿತ್ ಮಾಳವೀಯ ವಿರುದ್ಧ ಕೇಸ್ ದಾಖಲು

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಕೋಲ್ಕತ್ತಾದಲ್ಲಿ ಪ್ರಕರಣ ದಾಖಲಾಗಿದೆ.
ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಸಚಿವ ಚಂದ್ರಿಮಾ ಭಟ್ಟಾಚಾರ್ಯ ಅವರು ಅಮಿತ್ ಮಾಳವೀಯ ವಿರುದ್ಧ ಕೋಲ್ಕತಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮುಖ್ಯಮಂತ್ರಿ ತನ್ನ ಭಾಷಣದಲ್ಲಿ ಅಸಂಸದೀಯ ಮತ್ತು ಅಶ್ಲೀಲ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿ (ಅಮಿತ್ ಮಾಳವೀಯ) ತನ್ನ ಎಕ್ಸ್ ಪೋಸ್ಟ್ ನಲ್ಲಿ ಹೇಳಿಕೊಂಡಿದ್ದಾನೆ. ಇದು ಸಂಪೂರ್ಣವಾಗಿ ಸುಳ್ಳು ಮತ್ತು ಅವರ ಇಮೇಜ್ ಅನ್ನು ಕೆಡಿಸುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
“ಏಪ್ರಿಲ್ 19, 2024 ರಂದು, ಅಮಿತ್ ಮಾಳವೀಯ ಅವರು ಪೋಸ್ಟ್ ಮಾಡಿದ್ದಾರೆ. ಇದು ಸ್ಪಷ್ಟವಾಗಿ ಅವಹೇಳನಕಾರಿ ಮತ್ತು ಮಹಿಳೆಯರ ಘನತೆಯನ್ನು ಕಸಿದುಕೊಳ್ಳುತ್ತದೆ ಮತ್ತು ಇಡೀ ರಾಷ್ಟ್ರದ ಏಕೈಕ ಮಹಿಳಾ ಮುಖ್ಯಮಂತ್ರಿಯನ್ನು ಅವಮಾನಿಸುತ್ತದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth