ಅಟ್ಯಾಕ್: ಜಮ್ಮು ಮತ್ತು ಕಾಶ್ಮೀರದ 9 ಸ್ಥಳಗಳ ಮೇಲೆ ಎನ್ಐಎ ದಾಳಿ

ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ಜಮ್ಮು ಮತ್ತು ಕಾಶ್ಮೀರದ ಕನಿಷ್ಠ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಿದೆ. ಮೂಲಗಳ ಪ್ರಕಾರ, ಎನ್ಐಎ ತಂಡಗಳು ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್) ಸಿಬ್ಬಂದಿಯೊಂದಿಗೆ ದಾಳಿ ನಡೆಸಿದೆ.
ಶ್ರೀನಗರದ ಖಲಾಮ್ದಾನ್ ಪೋರಾದ ಮುಜಾಮಿಲ್ ಶಫಿ ಖಾನ್ (25) ಎಂಬಾತನ ಮನೆಯ ಮೇಲೆ ಎನ್ಐಎ ತಂಡ ದಾಳಿ ನಡೆಸಿದೆ. ಮುಜಾಮಿಲ್ ರೆವ್ಲಾನ್ ಇಂಡಿಯಾ ಎಂಬ ಸೌಂದರ್ಯವರ್ಧಕ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ನಿವೃತ್ತ ಸರ್ಕಾರಿ ಬಸ್ ಉದ್ಯೋಗಿ ಮುಷ್ತಾಕ್ ಅಹ್ಮದ್ ದಾರ್ ಅವರ ಮನೆಯ ಮೇಲೂ ದಾಳಿ ನಡೆಸಲಾಗಿದೆ.
ಇತ್ತೀಚೆಗೆ ಭಯೋತ್ಪಾದಕ ಹಣಕಾಸು ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಚೆನ್ನೈನಲ್ಲಿ ಇಬ್ಬರನ್ನು ಬಂಧಿಸಿತ್ತು.
ಬೆಂಗಳೂರು ಜೈಲಿನಲ್ಲಿ ಲಷ್ಕರ್-ಎ-ತೈಬಾ (ಎಲ್ಇಟಿ) ಭಯೋತ್ಪಾದಕನು ಕೈದಿಗಳನ್ನು ತೀವ್ರಗಾಮಿಗಳನ್ನಾಗಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಸಂಸ್ಥೆ ಏಳು ರಾಜ್ಯಗಳ ಅನೇಕ ಸ್ಥಳಗಳಲ್ಲಿ ಶೋಧ ನಡೆಸಿತ್ತು.
ತಮಿಳುನಾಡು, ಕೇರಳ ಮತ್ತು ಕರ್ನಾಟಕ ಸೇರಿದಂತೆ ಏಳು ರಾಜ್ಯಗಳ ಒಟ್ಟು 17 ಸ್ಥಳಗಳಲ್ಲಿ ಎನ್ಐಎ ಶೋಧ ನಡೆಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth