ಸಿಎಂ ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರ ಅರ್ಪಣೆ! - Mahanayaka

ಸಿಎಂ ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರ ಅರ್ಪಣೆ!

free ticket
23/04/2024

ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಕಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೇಯಸ್ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿನಿ ಎಂ.ಎ.ಜಯಶ್ರೀ ಅವರು ಫ್ರೀ ಟಿಕೆಟ್ ಹಾರವನ್ನು ಅರ್ಪಿಸಿದರು.

ಮುಖ್ಯಮಂತ್ರಿಗಳಿಗೆ ಹಾರ ಅರ್ಪಿಸುತ್ತಾ ಜಯಶ್ರೀ ಅವರು, “ನೀವು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಕೊಟ್ಟ ಉಚಿತ ಪ್ರಯಾಣದ ಫಲವಾಗಿ ನಾನು ಕಾನೂನು ವಿದ್ಯಾಭ್ಯಾಸವನ್ನು ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ. ಹೀಗಾಗಿ ಎಲ್ಲಾ ಫ್ರೀ ಟಿಕೆಟ್ ಗಳನ್ನು ಜೋಡಿಸಿಟ್ಟುಕೊಂಡು ಹಾರ ಮಾಡಿದ್ದೆ.

ನಿಮಗೆ ಅರ್ಪಿಸುವುದಕ್ಕೆ ತಿಂಗಳುಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದೆ. ಇವತ್ತು ಅರಸೀಕೆರೆಗೆ ಬರ್ತಾ ಇದ್ದೀರಿ ಅಂತ ಗೊತ್ತಾಯ್ತು. ಒಂದೇ ಉಸಿರಲ್ಲಿ ಹಾರ ಹಿಡ್ಕೊಂಡು ಓಡಿ ಬಂದಿದ್ದೇನೆ” ಎನ್ನುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯತೆ ಅರ್ಪಿಸಿ ಆಶೀರ್ವಾದ ಪಡೆದುಕೊಂಡರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿhttps://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ