POCSO ಕೇಸ್ : ಮುರುಘಾ ಶ್ರೀ ಮರಳಿ ಜೈಲಿಗೆ: ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ

ಚಿತ್ರದುರ್ಗ: POCSO ಕೇಸ್ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ, ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ಮುರುಘಾಶ್ರೀ ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ಸಂತ್ರಸ್ತ ಮಕ್ಕಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು.
ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಸ್ವಾಮೀಜಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನಿನ ಮೇಲೆ ಹೊರ ಬಂದಿದ್ದ ಸ್ವಾಮೀಜಿ ಎಸ್ ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳಲು ಆರಂಭಿಸಿದ್ದರು.
ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುರುಘಾ ಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿತ್ತು. ಅಲ್ಲದೆ, ಮುರುಘಾಮಠ ಹಾಗೂ ಎಸ್ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth