ಬಿಸಿಲಿನ ನಡುವೆಯೂ ಬಿರುಸಿನ ಮತದಾನ: ಮತದಾನ ಕೇಂದ್ರದೊಳಗೆ ಮೊಬೈಲ್ ನಿರ್ಬಂಧ

ಲೋಕ ಸಭಾ ಚುನಾವಣೆ: ಲೋಕಸಭಾ ಚುನಾವಣಾ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಬಿಸಿಲಿನ ನಡುವೆಯೂ ಜನರು ಬಿರುಸಿನ ಮತದಾನ ಮಾಡುತ್ತಿದ್ದಾರೆ.
ಮತದಾನದ ವೇಳೆ ಮೊಬೈಲ್ ಕೊಂಡೊಯ್ಯುವುದಕ್ಕೆ ನಿರ್ಬಂಧ ಹೇರಲಾಗಿದ್ದು, ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಮತಗಟ್ಟೆಯ ಹೊರಗಡೆಯೇ ಮೊಬೈಲ್ ಗಳನ್ನು ಇಟ್ಟು ಬಳಿಕ ಮತದಾನ ಮಾಡಲು ಸೂಚನೆ ನೀಡಲಾಗುತ್ತಿದೆ.
ಇಂದು ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ 13 ರಾಜ್ಯಗಳ 89 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಅಸ್ಸಾಂ, ಬಿಹಾರ, ಛತ್ತೀಸ್ ಗಢ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ರಾಜಸ್ಥಾನ, ತ್ರಿಪುರಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಜಮ್ಮು ಮತ್ತು ಕಾಶ್ಮೀರದ ಲೋಕಸಭಾ ಕ್ಷೇತ್ರಗಳಲ್ಲಿಯೂ ಇಂದು ಮತದಾನ ನಡೆಯಲಿದೆ. ಎರಡನೇ ಹಂತದ ಚುನಾವಣೆಯಲ್ಲಿ ಅಸ್ಸಾಂನ 5, ಬಿಹಾರದ 5, ಛತ್ತೀಸ್ಗಢದ 3, ಕರ್ನಾಟಕದ 14, ಕೇರಳದ 20, ಮಧ್ಯಪ್ರದೇಶದ 7, ಮಹಾರಾಷ್ಟ್ರದ 8, ಮಣಿಪುರದ 1, ರಾಜಸ್ಥಾನದ 13, ತ್ರಿಪುರಾದ 1, ಉತ್ತರ ಪ್ರದೇಶದ 8, ಪಶ್ಚಿಮ ಬಂಗಾಳದ 3 ಮತ್ತು ಜಮ್ಮು ಮತ್ತು ಕಾಶ್ಮೀರದ 1 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಜೂನ್ 1ರಂದು ಅಂತಿಮ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಅದೇ ದಿನ ಫಲಿತಾಂಶ ಪ್ರಕಟಗೊಳ್ಳಲಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth