ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ ಅಭ್ಯರ್ಥಿ!: ಬಿಜೆಪಿಗೆ ಮತ್ತೊಂದು ಜಯ! - Mahanayaka

ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ ಅಭ್ಯರ್ಥಿ!: ಬಿಜೆಪಿಗೆ ಮತ್ತೊಂದು ಜಯ!

bjp
29/04/2024

ಮಧ್ಯಪ್ರದೇಶ: ಗುಜರಾತ್ ನ ಸೂರತ್​ ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಇದರ ಬೆನ್ನಲ್ಲೇ ಮಧ್ಯಪ್ರದೇಶದಲ್ಲೂ ಇಂತಹದ್ದೇ ಘಟನೆಯೊಂದು ನಡೆದಿದೆ.

ಮಧ್ಯಪ್ರದೇಶದ ಇಂದೋರ್‌ ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ​​​​ಅವರು ಸೋಮವಾರ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.  ಅಲ್ಲದೇ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ‘ಕೈ’(Congress) ಪಕ್ಷಕ್ಕೆ ಕೈಕೊಟ್ಟಿದ್ದಾರೆ.

ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಅವರು ತಮ್ಮ ಎಕ್ಸ್​​​ ನಲ್ಲಿ  ಮಾಹಿತಿ ಹಂಚಿಕೊಂಡಿದ್ದು, ಕಾಂಗ್ರೆಸ್‌ ನ ಇಂದೋರ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಂಬ್ ಅವರನ್ನು ಬಿಜೆಪಿ ಸ್ವಾಗತಿಸುತ್ತದೆ” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಸೂರತ್ ನಂತೆಯೇ ಮಧ್ಯಪ್ರದೇಶದಲ್ಲಿ ಕೂಡ ಕಾಂಗ್ರೆಸ್ ಗೆ ಕೈ ಕೊಟ್ಟು ಅಭ್ಯರ್ಥಿ ಬಿಜೆಪಿಗೆ ಸೇರ್ಪಡೆಯಾಗಿದ್ದು, ನಂಬಿ ಟಿಕೆಟ್ ನೀಡಿದ ಕಾಂಗ್ರೆಸ್ ಗೆ ನಂಬಿಕೆ ದ್ರೋಹ ಬಗೆದಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ