Prajwal Revanna Case: ಮೂವರು ಮಹಿಳಾ ಸರ್ಕಾರಿ ಅಧಿಕಾರಿಗಳಿಗೆ SIT ನೋಟಿಸ್ - Mahanayaka

Prajwal Revanna Case: ಮೂವರು ಮಹಿಳಾ ಸರ್ಕಾರಿ ಅಧಿಕಾರಿಗಳಿಗೆ SIT ನೋಟಿಸ್

prajwal revanna
06/05/2024


Provided by

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ತನಿಖೆ ಚುರುಕುಗೊಳಿಸಿದೆ. ವರದಿಗಳ ಪ್ರಕಾರ, ವಿಶೇಷ ತನಿಖಾ ದಳ ಮೂವರು ಮಹಿಳಾ ಸರ್ಕಾರಿ ಅಧಿಕಾರಿಗಳಿಗೆ ನೋಟಿಸ್ ನೀಡಿದೆ ಎಂದು ಹೇಳಲಾಗಿದೆ.

ತನಿಖೆಗೆ ಸಹಕಾರ ನೀಡದ ಹಿನ್ನೆಲೆ ಮಹಿಳಾ ಅಧಿಕಾರಿಗಳಿಗೆ ಎಸ್ ಐಟಿ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ವೈರಲ್ ಆಗಿರುವ ವಿಡಿಯೋಗಳಲ್ಲಿ ಕೆಲ ಸರ್ಕಾರಿ ಮಹಿಳಾ ಅಧಿಕಾರಿಗಳ ಫೋಟೋಗಳು ಬಹಿರಂಗವಾಗಿರುವ ಹಿನ್ನೆಲೆ ನೋಟಿಸ್ ಕೊಡಲಾಗಿದೆ. ವಿಡಿಯೋ ಮತ್ತು ಫೋಟೋಗಳು ಹಾಸನ ಸೇರಿದಂತೆ ರಾಜ್ಯಾದ್ಯಂತ ವೈರಲ್ ಆಗಿವೆ.

ಇನ್ನೂ  ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿರುವ ಹಿನ್ನೆಲೆ ಮಹಿಳಾ ಸರ್ಕಾರಿ ಅಧಿಕಾರಿಗಳು ರಜೆ ಮೇಲೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಮಹಿಳಾ ಅಧಿಕಾರಿಗಳು ಎಸ್ ​ಐಟಿಯ ಸಂಪರ್ಕಕ್ಕೂ ಸಿಗುತ್ತಿಲ್ಲ. ಹೀಗಾಗಿ ನೋಟಿಸ್ ನೀಡಿ ಸೂಚನೆ ನೀಡಲಾಗಿದೆ.

ಎಸ್ ​ಐಟಿಯ ಬಂಧನಕ್ಕೊಳಗಾಗಿರುವ ಶಾಸಕ ಹೆಚ್​.ಡಿ.ರೇವಣ್ಣ ಬಸವನಗುಡಿ ನಿವಾಸದಲ್ಲಿ ಎಸ್ ಐಟಿ ತಂಡ ಮಹಜರು ನಡೆಸುತ್ತಿದೆ. ಈ ವೇಳೆ ಸಂತ್ರಸ್ತೆಯನ್ನು ಕರೆತಂದಿರುವ ಎಸ್​ ಐಟಿ ತಂಡ ಮಹಜರು ನಡೆಸುತ್ತಿದೆ. ಎಸ್ ​ಐಟಿ ಪ್ರತಿಯೊಂದು ಘಟನೆಯನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದೆ.

ಭಾನುವಾರ ಸಂಜೆ ನ್ಯಾಯಾಧೀಶರ ಮುಂದೆ ರೇವಣ್ಣ ಅವರನ್ನು  ಹಾಜರುಪಡಿಸಲಾಗಿತ್ತು. ನ್ಯಾಯಾಲಯ ನಾಲ್ಕು ದಿನ ಎಸ್ ​ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ