ತಮಿಳುನಾಡಿನ ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು - Mahanayaka
12:19 PM Saturday 23 - August 2025

ತಮಿಳುನಾಡಿನ ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು

09/05/2024


Provided by

ವಿರುಧುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಶಿವಕಾಶಿಯ ಸೆಂಗಮಲಪಟ್ಟಿ ಬಳಿಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದಂತೆ ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪಟಾಕಿಗಳನ್ನು ಸಂಗ್ರಹಿಸಿಟ್ಟಿದ್ದ ಏಳು ಕೊಠಡಿಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮತ್ತು ಅಗ್ನಿಶಾಮಕ ಸೇವಾ ಸಿಬ್ಬಂದಿ ಗಾಯಾಳುಗಳನ್ನು ಶಿವಕಾಶಿಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಂಕಿಯ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ ಮತ್ತು ಘಟಕವು ಪರವಾನಗಿ ಪಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಆರೈಕೆ ನೀಡುವಂತೆ ಮತ್ತು ಜೀವಗಳನ್ನು ಉಳಿಸುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ