ಅಶ್ಲೀಲ ವಿಡಿಯೋ ವೈರಲ್ : ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ನಟಿ ಜ್ಯೋತಿ ರೈ! - Mahanayaka
1:40 AM Saturday 18 - October 2025

ಅಶ್ಲೀಲ ವಿಡಿಯೋ ವೈರಲ್ : ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ನಟಿ ಜ್ಯೋತಿ ರೈ!

jyothi rai
10/05/2024

ಕಿರುತೆರೆ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ನಟಿ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದಾರೆ.


Provided by

ನನ್ನ ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದೆ. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ ಎಂದು ಜ್ಯೋತಿ ರೈ ಆತಂಕ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋವನ್ನು ಮಾರ್ಫಿಂಗ್ ಮಾಡಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ನಟಿ ಸೈಬರ್ ಕ್ರೈಂ ಪೊಲೀಸರಿಗೆ ಮನವಿ ಮಾಡಿದ್ದಾರೆ.

ನಾನು ಇಂಟರ್‌ ನೆಟ್ ಮತ್ತು ಸಾಮಾಜಿಕ ಜಾಲತಾಣಗಳನ್ನು ನಿತ್ಯ ಬಳಕೆ ಮಾಡುತ್ತೇನೆ. ಇತ್ತೀಚಿನ ದಿನಗಳಲ್ಲಿ ಫೇಕ್ ಅಕೌಂಟ್ ‌ಗಳ ಮೂಲಕ ನನಗೆ ಮೆಸೇಜ್‌ ಗಳು ಬರುತ್ತಿವೆ. ನನ್ನ ಫೋಟೋಗಳ ಜೊತೆಗೆ ಇಂಟರ್‌ ನೆಟ್ ಡೌನ್‌ ಲೋಡ್ ಮಾಡಲಾದ ನಗ್ನ ಹಾಗೂ ಅಶ್ಲೀಲ ಚಿತ್ರಗಳನ್ನು ಮಾರ್ಫಿಂಗ್ ಮಾಡಿ ನನ್ನ ಇನ್‌ ಬಾಕ್ಸ್‌ ಗೆ ಕಳುಹಿಸುತ್ತಿದ್ದಾರೆ. ನನ್ನ ಇನ್ಸ್ಟಾಗ್ರಾಂ ಸ್ಟೋರಿಗಳಲ್ಲಿ ಹಾಕಲಾದ ಫೋಟೋಗಳನ್ನು ಬಳಸಿ ಮಾರ್ಫಿಂಗ್ ಮಾಡಲಾಗಿದೆ. ನನಗೆ ಕಿರುಕುಳ ನೀಡುವ ಮತ್ತು ನನ್ನ ಮಾನಹಾನಿ ಮಾಡುವ ಉದ್ದೇಶದಿಂದಲೇ ಮಾಡಲಾಗಿದೆ ಎಂದಿದ್ದಾರೆ.

ಕೆಲವು ದಿವಸಗಳ ಹಿಂದೆಯೇ ಕ್ರೈಂ ವಿಭಾಗಕ್ಕೆ ದೂರು ಸಲ್ಲಿಸಿದ್ದೇನೆ. ನನ್ನ ಕುಟಂಬದವರ ಮಾನ ಹರಾಜು ಹಾಕುವವರಿಗೆ ಖಂಡಿತಾ ಕಠಿಣ ಶಿಕ್ಷೆ ಆಗತ್ತೆ ಎಂದು ಜ್ಯೋತಿ ರೈ ಕಿಡಿಗೇಡಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯದಲ್ಲಿಇತ್ತೀಚೆಗೆ ಅಶ್ಲೀಲ ವಿಡಿಯೋಗಳ  ಪ್ರಕರಣಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗಷ್ಟೇ ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ಸಾಕಷ್ಟು ಸುದ್ದಿ ಮಾಡಿವೆ. ಇದರ ಬೆನ್ನಲ್ಲೇ ಇದೀಗ ಪ್ರಸಿದ್ಧ ನಟಿಯದ್ದೆನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ