ಕುಮಾರಸ್ವಾಮಿಯೊಂದಿಗೆ ಹೊಂದಾಣಿಕೆ ಬೇಡ ಎಂದ ಸಚಿವ ಸಿ.ಪಿ.ಯೋಗೇಶ್ವರ್ - Mahanayaka
6:19 AM Wednesday 28 - January 2026

ಕುಮಾರಸ್ವಾಮಿಯೊಂದಿಗೆ ಹೊಂದಾಣಿಕೆ ಬೇಡ ಎಂದ ಸಚಿವ ಸಿ.ಪಿ.ಯೋಗೇಶ್ವರ್

27/02/2021

ಮಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಂಬಿಕೆಗೆ ಅರ್ಹರಲ್ಲ. ಅವರಿಗೆ ಬದ್ಧತೆಯಿಲ್ಲ. ಅವರೊಂದಿಗೆ ಹೊಂದಾಣಿಕೆ ಮಾಡುವುದು ಬೇಡ ಎಂದು ಬಿಜೆಪಿ ಹೈಕಮಾಂಡ್ ಗೆ  ಹೇಳಿದ್ದೇನೆ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.

ಮಂಗಳೂರಿನಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಯಾರಿಗೆ ಬೇಕಾದರೂ ಸೂಕ್ತರಾಗುತ್ತಾರೆ. ಅದಕ್ಕಾಗಿ  ಅವರನ್ನು ನಾನು ಜೋಕರ್ ಎಂದು ಕರೆದಿದ್ದೇನೆ. ಕುಮಾರಸ್ವಾಮಿಯವರು ವಿಧಾನಪರಿಷತ್ ನಲ್ಲಿ ಬಿಜೆಪಿಯೊಂದಿಗೆ ಸೇರಿ ಬಸವರಾಜ ಹೊರಟ್ಟಿಯವರನ್ನು ಸಭಾಪತಿ ಮಾಡಿದರು. ಆದರೆ ಇದರಿಂದ ನಮ್ಮ ಪಕ್ಷದ ಬೆಳವಣಿಗೆಗೆ ಕಷ್ಟ ಎಂದು ಯೋಗೇಶ್ವರ್ ಅವರು ಹೇಳಿದ್ದಾರೆ.

ಕುಮಾರಸ್ವಾಮಿಗೆ ರಾಜಕೀಯ ಅಭದ್ರತೆ ಕಾಡುತ್ತಿದೆ. ಅದಕ್ಕೆ ಈಗ ಗ್ರಾಮ ಪಂಚಾಯತಿ ಕಾರ್ಯಕ್ರಮದಲ್ಲೂ ಭಾಗವಹಿಸುತ್ತಿದ್ದಾರೆ ಎಂದು ಟೀಕಿಸಿದ ಅವರು, ಕುಮಾರಸ್ವಾಮಿಯವರು ಮೈಸೂರು ಪಾಲಿಕೆಯಲ್ಲಿ ಕಾಂಗ್ರೆಸ್ ಜೊತೆಗೆ ಕೈಜೋಡಿಸಿದರು. ಹೀಗಾಗಿ ಅವರನ್ನು ನಂಬಬೇಡಿ ಎಂದು ನಮ್ಮ ಪಕ್ಷದವರಿಗೆ ಹೇಳುತ್ತೇನೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ