ದುರಂತ: ಬಸ್ ಮತ್ತು ಲಾರಿಗೆ ಬೆಂಕಿ ತಗುಲಿ 6 ಮಂದಿ ಸಾವು - Mahanayaka

ದುರಂತ: ಬಸ್ ಮತ್ತು ಲಾರಿಗೆ ಬೆಂಕಿ ತಗುಲಿ 6 ಮಂದಿ ಸಾವು

15/05/2024


Provided by

ಬಾಪಟ್ಲಾ ಜಿಲ್ಲೆಯ ಚಿನ್ನಗಂಜಾಂನಿಂದ ಹೈದರಾಬಾದ್ ಗೆ ಹೋಗುತ್ತಿದ್ದ ಬಸ್ ಚಿಲ್ಕಲೂರಿಪೇಟೆಯಲ್ಲಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ.

ಡಿಕ್ಕಿ ಹೊಡೆದ ನಂತರ ಎರಡು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಈ ಮಧ್ಯೆ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುಂಟೂರಿಗೆ ಸ್ಥಳಾಂತರಿಸಲಾಗಿದೆ.

ಮೃತರನ್ನು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಅಂಜಿ (35), ಉಪ್ಪುಂದೂರು ಕಾಶಿ (65), ಉಪ್ಪುಗುಂದೂರು ಲಕ್ಷ್ಮಿ (55) ಮತ್ತು ಮುಪ್ಪರಾಜು ಖ್ಯಾತಿ ಸಾಯಿಶ್ರೀ (8) ಎಂದು ಗುರುತಿಸಲಾಗಿದೆ. ಮೃತಪಟ್ಟ ಇನ್ನಿಬ್ಬರ ಗುರುತು ಪತ್ತೆ ಹಚ್ಚಲಾಗುತ್ತಿದೆ.

 

ಪಲ್ನಾಡು ಜಿಲ್ಲೆಯ ಚಿಲಕಲುರಿಪೇಟೆ ಮಂಡಲದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಬಾಪಟ್ಲಾ ಜಿಲ್ಲೆಯ ಚಿನ್ನಗಂಜಾಂನಿಂದ ಹೈದರಾಬಾದ್ಗೆ ತೆರಳುತ್ತಿದ್ದಾಗ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಎರಡು ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ

 

 

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ