ವಿಶ್ವಕಪ್ ನಲ್ಲಿ T20 ಪಂದ್ಯಕೂಟದಲ್ಲಿ ರಾರಾಜಿಸಲಿದೆ ಕರ್ನಾಟಕದ ನಂದಿನಿ

ಈ ಬಾರಿ ವಿಶ್ವಕಪ್ ನಲ್ಲಿ T20 ಪಂದ್ಯಕೂಟದಲ್ಲಿ ರಾರಾಜಿಸಲಿದೆ ಕರ್ನಾಟಕ ರಾಜ್ಯದ ಹೆಮ್ಮೆಯ ನಂದಿನಿ ಸಂಸ್ಥೆಯ ಲೋಗೋ ರಾರಾಜಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಫೋಟೋ ಸಹಿತ ಬರೆದುಕೊಂಡಿರುವ ಅವರು, ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್ ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ ಎಂದು ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068