ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳಿದ್ದ ದಂಪತಿ: ಸಂಜೆ ಬಂದು ನೋಡಿದಾಗ ಕಾದಿತ್ತು ಶಾಕ್! - Mahanayaka
12:52 AM Friday 19 - December 2025

ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳಿದ್ದ ದಂಪತಿ: ಸಂಜೆ ಬಂದು ನೋಡಿದಾಗ ಕಾದಿತ್ತು ಶಾಕ್!

shobin
21/05/2024

ಬೆಂಗಳೂರು:  5 ವರ್ಷ ವಯಸ್ಸಿನ ಬಾಲಕನೊಬ್ಬ ನೀರಿನ ಸಂಪ್ ಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಕೆ.ಆರ್​.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಮುಂಭಾಗ ನಡೆದಿದೆ.

ನೇಪಾಳ ಮೂಲದ ಸುಬೀನ್(5) ಸಾವನ್ನಪ್ಪಿದ ಬಾಲಕನಾಗಿದ್ದಾನೆ. ನೇಪಾಳ ಮೂಲದ ದಂಪತಿ  ಬೆಂಗಳೂರಿನಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

ಕೆಲಸಕ್ಕೆ ತೆರಳುವ ವೇಳೆ ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿ ಬರುತ್ತಿದ್ದರು. ಈ ವೇಳೆ ಮಗು  ಆಟವಾಡುತ್ತಾ ಹೋಗಿ ಸಂಪ್ ಗೆ ಬಿದ್ದು ಸಾವನ್ನಪ್ಪಿದೆ ಎಂದು ಹೇಳಲಾಗಿದೆ.

ಕೆಲಸ ಮುಗಿಸಿ ದಂಪತಿ ಮನೆಗೆ ಬಂದ ವೇಳೆ ಮಗು ನಾಪತ್ತೆಯಾಗಿತ್ತು. ಹುಡುಕಾಡಿದ ವೇಳೆ ನೀರಿನ ಸಂಪ್ ಗೆ ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಕೆ.ಆರ್​.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ