ಕಂಟೇನರ್– ಇನೋವಾ ಕಾರಿನ ನಡುವೆ ಭೀಕರ ಅಪಘಾತ: ತಾಯಿ– ಮಗ ಸ್ಥಳದಲ್ಲೇ ಸಾವು

ಹಾಸನ: ಕಂಟೇನರ್ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ತಾಯಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75 ಕೆಂಪುಹೊಳೆ ಸಮೀಪ ನಡೆದಿದೆ.
ಶಫೀಕ್ (20), ಸಫಿಯಾ (50) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಂಟೇನರ್ ಲಾರಿಗೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಇತರ ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ವರದಿಗಳ ಪ್ರಕಾರ, ಮೃತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಮೂಲದವರು ಎಂದು ತಿಳಿದು ಬಂದಿದೆ. ಘಟನೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಪುಹೊಳೆ ಸಮೀಪ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068