ಕಾಂಗ್ರೆಸ್ ಮುಖಂಡೆ, ನಟಿ ವಿದ್ಯಾ ಬರ್ಬರ ಹತ್ಯೆ: ಪತಿಯಿಂದಲೇ ನಡೆಯಿತು ಭೀಕರ ಹತ್ಯೆ! - Mahanayaka
12:15 AM Thursday 23 - October 2025

ಕಾಂಗ್ರೆಸ್ ಮುಖಂಡೆ, ನಟಿ ವಿದ್ಯಾ ಬರ್ಬರ ಹತ್ಯೆ: ಪತಿಯಿಂದಲೇ ನಡೆಯಿತು ಭೀಕರ ಹತ್ಯೆ!

vidya
21/05/2024

ಮೈಸೂರು: ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ,  ಚಿತ್ರ ನಟಿ ವಿದ್ಯಾ ಅವರನ್ನು ಪತಿಯೇ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ತುರಗನೂರು ಗ್ರಾಮದಲ್ಲಿ ನಡೆದಿದೆ.

ಕೌಟುಂಬಿಕ ಕಲಹ ಹಿನ್ನೆಲೆ ಪತಿಯೇ ವಿದ್ಯಾ ಅವರನ್ನು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲೂ ಸಕ್ರಿಯವಾಗಿದ್ದರು.

ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿ ಹತ್ಯೆ ಪತಿ ನಂದೀಶ್ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾ ಅವರ ಮೃತದೇಹವನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಕೊಲೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಕೊಲೆಗೆ ನಿಖರ ಕಾರಣ ಎಂದು ತಿಳಿದು ಬೇಕಿದ್ದು, ಈ ಬಗ್ಗೆ ಪೊಲೀಸರು ಕುಟುಂಬಸ್ಥರು ಹಾಗೂ ನೆರೆಹೊರೆಯವರಿಂದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ