ಅಮೆರಿಕದಲ್ಲಿ ಕಾರು ಅಪಘಾತ: ಮೂವರು ಭಾರತೀಯ ಮೂಲದ ವಿದ್ಯಾರ್ಥಿಗಳ ಸಾವು, ಇಬ್ಬರಿಗೆ ಗಾಯ

ಅಮೆರಿಕದ ಜಾರ್ಜಿಯಾದಲ್ಲಿ ನಡೆದ ಕಾರು ಅಪಘಾತದಲ್ಲಿ ಮೂವರು ಭಾರತೀಯ ಮೂಲದ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. 18 ವರ್ಷ ವಯಸ್ಸಿನ ಐವರು ವಿದ್ಯಾರ್ಥಿಗಳು ಆಲ್ಫಾರೆಟ್ಟಾ ಹೈಸ್ಕೂಲ್ ಮತ್ತು ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು.
ಜಾರ್ಜಿಯಾದ ಆಲ್ಫಾರೆಟ್ಟಾದಲ್ಲಿ ಸಂಭವಿಸಿದ ಭೀಕರ ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಶಂಕಿಸಲಾಗಿದೆ.
ಆರ್ಯನ್ ಜೋಶಿ ಮತ್ತು ಶ್ರೀಯಾ ಅವಸರಲಾ ಸ್ಥಳದಲ್ಲೇ ಸಾವನ್ನಪ್ಪಿದ್ರೆ ಅನ್ವಿ ಶರ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ನಿಧನರಾಗಿದ್ದಾರೆ.
ಗಾಯಗೊಂಡ ವಿದ್ಯಾರ್ಥಿಗಳಾದ ರಿತ್ವಾಕ್ ಸೋಮಪಲ್ಲಿ ಮತ್ತು ಮೊಹಮ್ಮದ್ ಲಿಯಾಕತ್ ಅಲ್ಫಾರೆಟ್ಟಾದ ನಾರ್ತ್ ಫುಲ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth