ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡಲು ಕೇಂದ್ರ ಸರ್ಕಾರ ಸ್ಪಂದಿಸಿಲ್ಲ: ಡಾ.ಜಿ.ಪರಮೇಶ್ವರ - Mahanayaka

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡಲು ಕೇಂದ್ರ ಸರ್ಕಾರ ಸ್ಪಂದಿಸಿಲ್ಲ: ಡಾ.ಜಿ.ಪರಮೇಶ್ವರ

g parameshwar
22/05/2024


Provided by

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಯವರು ಪತ್ರ ಬರೆದಿದ್ದರೆ. ಎಸ್ ಐಟಿ ಪತ್ರ ಬರೆದಿದೆ. ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ‌ ಎಂದರು.

ಕೇಂದ್ರ ಸರ್ಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡಿದರೆ ಅರ್ಥವಿಲ್ಲ. ಪ್ರಜ್ವಲ್ ರೇವಣ್ಣ ಅವರ ಮೇಲೆ ವಾರಂಟ್ ಜಾರಿ ಮಾಡಿರುವುದನ್ನು ತಿಳಿಸಲಾಗಿದೆ. ವಾರಂಟ್ ಜಾರಿಯಾದ ನಂತರ ಪಾಸ್‌ ಪೋರ್ಟ್ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಹೇಳಿದರು.

ಉಪಮುಖ್ಯಮಂತ್ರಿಯವರದ್ದು ಎನ್ನಲಾದ ಆಡಿಯೋ ಕುರಿತು ಹೆಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಪ್ರತಿಯೊಂದಕ್ಕೂ ಮಾತನಾಡುತ್ತಿದ್ದಾರೆ. ಕಾನೂನಿಮ ಚೌಕಟ್ಟಿನಲ್ಲಿ ಎಸ್ ಐಟಿ ಏನೆಲ್ಲ ಕೆಲಸ ಮಾಡಬೇಕೋ ಅದನ್ನು ಮಾಡುತ್ತಿದೆ. ಕುಮಾರಸ್ವಾಮಿ ಅವರು ತನಿಖೆ ಹೀಗೆ ನಡೆಯಬೇಕು, ಹಾಗೇ ಮಾಡಬೇಕು ಅಂತ ಹೇಳಿದ ಹಾಗೇ ಕಾಣುತ್ತಿದೆ ಎಂದು ಆರೋಪಿಸಿದರು.

ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ ಎಂಬುದನ್ನು ನಾನು ಮತ್ತು ಮುಖ್ಯಮಂತ್ರಿಯವರು ಅಂಕಿ-ಅಂಶವನ್ನು ಪ್ರಕಟಿಸಿದ್ದೇವೆ. ಯಾರ ಕಾಲದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿದ್ದವು ಎಂಬುದಕ್ಕೆ ಅಂಕಿ-ಅಂಶಗಳಿವೆ. ಅದಕ್ಕೆ ಬಿಜೆಪಿಯವರು ಮೊದಲು ಉತ್ತರ ನೀಡಲಿ ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ