ಗ್ಯಾಸ್ ಸೋರಿಕೆ: ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವು! - Mahanayaka

ಗ್ಯಾಸ್ ಸೋರಿಕೆ: ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವು!

mysore news
22/05/2024

ಮೈಸೂರು: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದ್ದು, ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮಂಜುಳಾ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (17) ಮೃತಪಟ್ಟವರು ಎಂದು ಗುರುತಿಸಲಾಗಿದೆ.  ಇವರು ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.  ಸ್ಥಳಕ್ಕೆ ಕಮಿಷನರ್​ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವರದಿಗಳ ಪ್ರಕಾರ, ಚಿಕ್ಕಮಗಳೂರು ಸಖರಯಪಟ್ಟಣದ ಕುಟುಂಬ ಕಳೆದ 30 ವರ್ಷದಿಂದ ಮೈಸೂರಿನಲ್ಲಿ ವಾಸವಾಗಿತ್ತು. ಗುರುವಾರ ಸಂಬಂಧಿಕರ ಮದುವೆ ಹೋಗಿದ್ದರು. ಮದುವೆ ಮುಗಿಸಿಕೊಂಡು ತಮ್ಮ ಊರಾದ ಸಖರಯಪಟ್ಟಣಕ್ಕೆ ಹೋಗಿದ್ದರು. ಅಲ್ಲಿಂದ ಸೋಮವಾರ ಬೆಳಗ್ಗೆ ಮೈಸೂರಿಗೆ ವಾಪಸ್ಸಾಗಿದ್ದರು. ಸೋಮವಾರ ರಾತ್ರಿ  ಅನಿಲ ಸೋರಿಕೆಯಿಂದಾಗಿ  ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅರ್ಚನಾ ಮತ್ತು ಸ್ವಾತಿ ಕಾಲೇಜು ವಿದ್ಯಾರ್ಥಿನಿಯರಾಗಿದ್ದರು, ಅವರ ಸಂಪರ್ಕ ಸಾಧ್ಯವಾಗದ ಹಿನ್ನೆಲೆಯಲ್ಲಿ ಕಾಲೇಜು ಸ್ನೇಹಿತರ ಮನೆಗೆ ಆಗಮಿಸಿದ ವೇಳೆ ಇಡೀ ಕುಟುಂಬ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮೃತರ ಮನೆಯಲ್ಲಿ 4 ಗ್ಯಾಸ್ ಸಿಲಿಂಡರ್ ಗಳು ಪತ್ತೆಯಾಗಿವೆ ಎನ್ನಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ