ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಗೆ ಟ್ರಕ್ ಡಿಕ್ಕಿ: 11 ಸಾವು; 10 ಜನರಿಗೆ ಗಾಯ - Mahanayaka

ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಗೆ ಟ್ರಕ್ ಡಿಕ್ಕಿ: 11 ಸಾವು; 10 ಜನರಿಗೆ ಗಾಯ

26/05/2024


Provided by

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಶನಿವಾರ ರಾತ್ರಿ ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ.

ಟ್ರಕ್ ಕಲ್ಲಿನಿಂದ ತುಂಬಿತ್ತು ಮತ್ತು ಬಸ್ ಒಂದು ಡಜನ್ ಗೂ ಹೆಚ್ಚು ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು.
ಖುತಾರ್ ಪೊಲೀಸ್ ಠಾಣೆ ಪ್ರದೇಶದ ಗೋಲಾ ಬೈಪಾಸ್ ರಸ್ತೆಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೀತಾಪುರದಿಂದ ಪೂರ್ಣಗಿರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಹಜಹಾನ್‌ಪುರದ ಧಾಬಾದಲ್ಲಿ ನಿಂತಿತ್ತು. ಕಲ್ಲು ತುಂಬಿದ ಟ್ರಕ್ ಬಸ್ ಗೆ ಡಿಕ್ಕಿ ಹೊಡೆದು ಅದರ ಮೇಲೆ ಪಲ್ಟಿಯಾಗಿದ್ದು, ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.

ಬಲಿಯಾದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು.
ಸುಮಾರು ಮೂರು ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯ ನಂತರ, ಟ್ರಕ್ ಅಡಿಯಲ್ಲಿ ಹಲವಾರು ಶವಗಳನ್ನು ಹೊರತೆಗೆಯಲಾಯಿತು. ಟ್ರಕ್ ಅಡಿಯಲ್ಲಿ ನಜ್ಜುಗುಜ್ಜಾದ ಯಾತ್ರಾರ್ಥಿಗಳನ್ನು ಹೊರತೆಗೆಯಲು ರಕ್ಷಣಾ ತಂಡಗಳು ಕ್ರೇನ್ ಬಳಸಿ ಅವಶೇಷಗಳನ್ನು ತೆಗೆಯಿತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ