ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆ ಸಾವಿಗೆ ಶರಣು! - Mahanayaka

ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆ ಸಾವಿಗೆ ಶರಣು!

akshatha
26/05/2024


Provided by

ಶಿವಮೊಗ್ಗ:  ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ನಡೆದಿದೆ.

ಅಕ್ಷತಾ(30) ಸಾವಿಗೆ ಶರಣಾದ ಮಹಿಳೆಯಾಗಿದ್ದಾರೆ.  ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ಅಕ್ಷತಾ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.

ಮಾಹಿತಿಗಳ ಪ್ರಕಾರ ಕೆಲವು ದಿನಗಳಿಂದ ಅಕ್ಷತಾ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಪರೀತ ಹೊಟ್ಟೆ ನೋವು ಸಹಿಸಲಾರದೇ ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದವರಾಗಿದ್ದ ಅಕ್ಷತಾ, ಚಂದ್ರಗುತ್ತಿ ಗ್ರಾಮದ ಸಂತೋಷ್ ಅವರೊಂದಿಗೆ ವಿವಾಹವಾಗಿದ್ದರು. ಸೊರಬ ಪಟ್ಟಣದ ವಿದ್ಯುತ್ ನಗರದ ಮನೆಯಲ್ಲಿ ಅವರು ಸಾವಿಗೆ ಶರಣಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೊರಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ