ಬೈಕ್—ಕೆಎಸ್ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ: ಮೂವರು ಯುವಕರು ಸ್ಥಳದಲ್ಲೇ ಸಾವು - Mahanayaka

ಬೈಕ್—ಕೆಎಸ್ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ: ಮೂವರು ಯುವಕರು ಸ್ಥಳದಲ್ಲೇ ಸಾವು

kalaburagi
27/05/2024


Provided by

ಕಲಬುರಗಿ: ಬೈಕ್ ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ  ಮೂವರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿದ ಘಟನೆ  ಕಮಲಾಪುರ ತಾಲೂಕಿನ ಬಳಿ ನಡೆದಿದೆ.

ಕಿಣ್ಣಿ ಸಡಕ್ ಗ್ರಾಮದ ವಿಶಾಲ್ ಜಾಧವ್ (17), ಚಂದ್ರಕಾಂತ (20) ಮತ್ತು ಸಮೀರ್ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೆಲಸಕ್ಕಾಗಿ ಒಂದೇ ಬೈಕ್ ನಲ್ಲಿ ತಮ್ಮ ಗ್ರಾಮದಿಂದ ಕಲಬುರಗಿಗೆ ಯುವಕರು ಆಗಮಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಕಲಬುರಗಿಯಿಂದ ಹುಮನಾಬಾದ್ ಕಡೆಗೆ ಬಸ್ ತೆರಳುತ್ತಿತ್ತು. ಈ ವೇಳೆ ಕಮಲಾಪುರ ತಾಲೂಕು ಬಳಿ ಬರುತ್ತಿದ್ದಂತೆ ಬೈಕ್​ ಮತ್ತು ಬಸ್​ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಯುವಕರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿದು ಕಮಲಾಪುರದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ