ಸ್ನೇಹಿತರ ಜೊತೆಗೆ ಕೆರೆಗೆ ಈಜಲು ಇಳಿದಿದ್ದ ಬಾಲಕನ ದಾರುಣ ಸಾವು

ಚಿಕ್ಕಮಗಳೂರು: ಸ್ನೇಹಿತರ ಜೊತೆಗೆ ಕೆರೆಗೆ ಈಜಲು ಇಳಿದಿದ್ದ 13 ವರ್ಷದ ಬಾಲಕನೊಬ್ಬ ಕೆರೆಯಲ್ಲಿ ಕಾಲು ಹೂತು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಕೆರೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ನಗರದ ಗಾಂಧಿನಗರ ಬಡಾವಣೆಯ ಬಾಲಕ, ಎಂಟನೇ ತರಗತಿ ವಿದ್ಯಾರ್ಥಿ ಶಶಾಂಕ್(13) ಮೃತಪಟ್ಟ ಬಾಲಕನಾಗಿದ್ದಾನೆ.
ಒಟ್ಟು ನಾಲ್ವರು ಸ್ನೇಹಿತರು ಈಜು ಕಲಿಯಲೆಂದು ಕೆರೆಗೆ ಇಳಿದಿದ್ದರು. ಈ ಪೈಕಿ ಶಶಾಂಕ್ ಕೆರೆಯಲ್ಲಿ ಕಾಲು ಹೂತು ದಾರುಣವಾಗಿ ಸಾವನ್ನಪ್ಪಿದ್ದಾನೆ.
ಕೆರೆಯಿಂದ ವಿದ್ಯಾರ್ಥಿಯ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಮೇಲೆತ್ತಿದ್ದಾರೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068