ಮಾನವ ಕಳ್ಳಸಾಗಣೆ ಆರೋಪ: ಯೂಟ್ಯೂಬರ್ ಬಾಬಿ ಕಟಾರಿಯಾ ಬಂಧನ

ಮಾನವ ಕಳ್ಳಸಾಗಣೆ ಮತ್ತು ವಂಚನೆ ಆರೋಪದ ಮೇಲೆ ಸೋಮವಾರ ಬಂಧಿಸಲ್ಪಟ್ಟ ವಿವಾದಾತ್ಮಕ ಯೂಟ್ಯೂಬರ್ ಬಲ್ವಂತ್ ಕಟಾರಿಯಾ ಅಲಿಯಾಸ್ ಬಾಬಿ ಕಟಾರಿಯಾ ಅವರನ್ನು ನಗರ ನ್ಯಾಯಾಲಯವು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನಿಂದ 20 ಲಕ್ಷ ನಗದು, ಕೆಲವು ದಾಖಲೆಗಳು ಮತ್ತು ನಾಲ್ಕು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಬಾಬಿ ಕಟಾರಿಯಾನನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ತನಿಖೆಯ ಎಲ್ಲಾ ಅಂಶಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ಅಪರಾಧ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ವರುಣ್ ದಹಿಯಾ ತಿಳಿಸಿದ್ದಾರೆ.
ಕಟಾರಿಯಾ ಕಳೆದ ವರ್ಷದಿಂದ ಮಾನವ ಕಳ್ಳಸಾಗಣೆದಾರರ ದೊಡ್ಡ ಸಂಪರ್ಕದಲ್ಲಿ ಭಾಗಿಯಾಗಿದ್ದಾನೆ ಮತ್ತು ಅಂತರರಾಷ್ಟ್ರೀಯ ಗ್ಯಾಂಗ್ ನೊಂದಿಗೆ ಸಂಪರ್ಕ ಹೊಂದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳಾ ಸ್ನೇಹಿತೆಯೊಂದಿಗೆ ಅಕ್ರಮ ವ್ಯವಹಾರ ನಡೆಸುತ್ತಿದ್ದ ಕಟಾರಿಯಾ ಹಲವಾರು ನಿರುದ್ಯೋಗಿ ಯುವಕರಿಗೆ ಮೋಸ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth