ದಿಲ್ಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಅರ್ಜಿ ಸ್ವೀಕರಿಸಲು ಸುಪ್ರೀಂ ನಿರಾಕರಣೆ

ದಿಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಮಧ್ಯಂತರ ಜಾಮೀನನ್ನು ಒಂದು ವಾರ ವಿಸ್ತರಿಸಬೇಕು ಎಂದು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಸ್ವೀಕರಿಸಲು ನಿರಾಕರಿಸಿದೆ.
ಕೇಜ್ರಿವಾಲ್ ರಿಗೆ ಸಾಮಾನ್ಯ ಜಾಮೀನಿಗಾಗಿ ಅರ್ಜಿ ಸಲ್ಲಿಸಲು ವಿಚಾರಣಾ ನ್ಯಾಯಾಲಯದ ಮೊರೆ ಹೋಗಲು ಸ್ವಾತಂತ್ರ್ಯ ನೀಡಲಾಗಿರುವುದರಿಂದ ಈ ಅರ್ಜಿ ಮಾನ್ಯ ಮಾಡಲಾಗದು ಎಂದು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಹೇಳಿದೆ.
ವೈದ್ಯಕೀಯ ಕಾರಣಗಳನ್ನು ನೀಡಿ ಕೇಜ್ರಿವಾಲ್ ತಮ್ಮ ಮಧ್ಯಂತರ ಜಾಮೀನಿನ ಏಳು ದಿನ ವಿಸ್ತರಣೆ ಕೋರಿದ್ದರು.
“ವಿವರಿಸಲಾಗದ ತೂಕ ಇಳಿಕೆಯು ಜೀವಕ್ಕೆ ಅಪಾಯವುಂಟು ಮಾಡಬಹುದಾದ ಕಾಯಿಲೆಯ ಲಕ್ಷಣವಾಗಿದೆ. ಜೈಲಿನ ಅಧಿಕಾರಿಗಳ ನಿರ್ಲಕ್ಷ್ಯದ ಧೋರಣೆಯೂ ಸ್ವಲ್ಪ ಮಟ್ಟಿಗೆ ನನ್ನ ಆರೋಗ್ಯದ ಸಮಸ್ಯೆಗೆ ಕಾರಣ. ಇನ್ನೊಂದು ವಾರ ಜಾಮೀನು ವಿಸ್ತರಿಸಿದರೆ ಆರೋಗ್ಯ ಸಮಸ್ಯೆಗಳತ್ತ ಗಮನ ನೀಡಲು ಸಹಕಾರಿಯಾಗಲಿದೆ” ಎಂದು ತಮ್ಮ ಅರ್ಜಿಯಲ್ಲಿ ಕೇಜ್ರಿವಾಲ್ ಹೇಳಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth