ಚಿಕ್ಕಬಳ್ಳಾಪುರ: ಒಂದೇ ವಾರದಲ್ಲಿ ಇಬ್ಬರು ಯುವತಿಯರು ನಾಪತ್ತೆ

ಚಿಕ್ಕಬಳ್ಳಾಪುರ: ಕಳೆದ ಒಂದೇ ವಾರದಲ್ಲಿ ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಯುವತಿಯರ ನಾಪತ್ತೆ ಪ್ರಕರಣ ಬೆಳಕಿಗೆ ಬಂದಿದ್ದು, ಯುವತಿಯರ ನಾಪತ್ತೆ ಪ್ರಕರಣ ಪೋಷಕರಿಗೆ ಆತಂಕವನ್ನುಂಟು ಮಾಡಿದೆ.
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಸಿ.ಶಿಲ್ಪಾ(22) ಹಾಗೂ ಕಲ್ಲುಕುಂಟೆ ಗ್ರಾಮದ ತೇಜಸ್ವಿನಿ ನಾಪತ್ತೆಯಾದ ಯುವತಿಯರಾಗಿದ್ದಾರೆ.
ಇಬ್ಬರು ಯುವತಿಯರನ್ನು ಪತ್ತೆ ಮಾಡಿ ಕೊಡುವಂತೆ ಯುವತಿಯರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಂದಿಗಿರಿಧಾಮ ಪೊಲೀಸ್ ಠಾಣೆ ಹಾಗೂ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068