ಚಿಕಿತ್ಸೆಗೆಂದು ಕರೆತಂದು ಯುವತಿಯ ಮೇಲೆ ಪರಿಚಯಸ್ಥನಿಂದಲೇ ಅತ್ಯಾಚಾರ! - Mahanayaka
10:17 PM Saturday 23 - August 2025

ಚಿಕಿತ್ಸೆಗೆಂದು ಕರೆತಂದು ಯುವತಿಯ ಮೇಲೆ ಪರಿಚಯಸ್ಥನಿಂದಲೇ ಅತ್ಯಾಚಾರ!

sajith
30/05/2024


Provided by

ಮಂಗಳೂರು: ಯುವತಿಯನ್ನು ಚಿಕಿತ್ಸೆಗೆಂದು ಕರೆ ತಂದು ಪರಿಚಯಸ್ಥನೇ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕೇರಳ ಮೂಲದ ಸಜಿತ್ ಕೃತ್ಯ ಎಸಗಿದ ಆರೋಪಿ ಎಂದು ಗುರುತಿಸಲಾಗಿದೆ.  ವರದಿಗಳ ಪ್ರಕಾರ,  ಪೈಲ್ಸ್ ಗೆ ಚಿಕಿತ್ಸೆಗೆ ಯುವತಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಸಜಿತ್, ಚಿಕಿತ್ಸೆಯ ಬಳಿಕ ಆಸ್ಪತ್ರೆಯ ಕೊಠಡಿಯಲ್ಲಿದ್ದ ವೇಳೆ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದಾನೆ. ಬಳಿಕ ಆಕೆಯ ನಗ್ನ ಫೋಟೋಗಳನ್ನ ತೆಗೆದುಕೊಂಡಿದ್ದ.

ನಂತರ ಫೋಟೋ ಬಹಿರಂಗ ಮಾಡುವುದಾಗಿ ಬೆದರಿಸಿ ಮಂಗಳೂರಿನ ಖಾಸಗಿ ಹೊಟೇಲ್ ಗೆ ಕರೆಸಿ ಅತ್ಯಾಚಾರ ನಡೆಸಿದ್ದ. ನಂತರ ಯುವತಿಗೆ ಫುಡ್ ಪಾಯ್ಸನ್ ಆಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದ ವೇಳೆ , ಆಸ್ಪತ್ರೆಯ ಕೊಠಡಿಯಲ್ಲೂ ಅತ್ಯಾಚಾರ ನಡೆಸಿದ್ದು, ಈ ವಿಚಾರ ಯಾರಿಗಾದರೂ ತಿಳಿಸಿದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಕದ್ರಿ ಪೊಲೀಸ್ ಠಾಣೆಯಲ್ಲಿಯುವತಿ ದೂರು‌ ನೀಡಿದ್ದಾಳೆ ಎಂದು ತಿಳಿದು ಬಂದಿದೆ.

ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕದ್ರಿ ಪೊಲೀಸರು  ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ