ರಾಜೀನಾಮೆ ನೀಡುತ್ತಾರಾ ಸಚಿವ ಬಿ.ನಾಗೇಂದ್ರ ? - Mahanayaka

ರಾಜೀನಾಮೆ ನೀಡುತ್ತಾರಾ ಸಚಿವ ಬಿ.ನಾಗೇಂದ್ರ ?

b nagendra
30/05/2024


Provided by

ಬೆಂಗಳೂರು: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರ ತಲೆದಂಡವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಚಂದ್ರಶೇಖರನ್ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಹಲವು ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇದೇ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ಪಡೆಯಬೇಕು ಅಂತ ವಿಪಕ್ಷ ಬಿಜೆಪಿ ಆಗ್ರಹಿಸಿತ್ತು ಮೇಲ್ನೋಟಕ್ಕೆ ಸಚಿವ ನಾಗೇಂದ್ರ ವಿರುದ್ಧ ಆರೋಪ ಕೇಳಿ ಬಂದಿದ್ದು, ಮುಜುಗರದಿಂದ ತಪ್ಪಿಸಿಕೊಳ್ಳಲು ಸರ್ಕಾರ ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಸಚಿವ ನಾಗೇಂದ್ರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕಂಡು ಬರುತ್ತಿರುವ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಸರ್ಕಾರಕ್ಕೆ ಮುಖಭಂಗ ಆಗುವ ಸಾಧ್ಯತೆ ಹಿನ್ನಲೆಯಲ್ಲಿ, ಇದನ್ನು ತಪ್ಪಿಸಿಕೊಳ್ಳಲು ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂ ಮುಂದಾಗಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಸರ್ಕಾರದ ಮುಂದಿನ ನಡೆಯ ಬಗ್ಗೆ ಕಾದು ನೋಡಬೇಕಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ