ಇತ್ತೀಚೆಗಷ್ಟೇ ಗ್ರಾ.ಪಂ. ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಪಕ್ಷೇತರ ಅಭ್ಯರ್ಥಿ ಹೃದಯಾಘಾತದಿಂದ ನಿಧನ - Mahanayaka
8:30 AM Wednesday 15 - October 2025

ಇತ್ತೀಚೆಗಷ್ಟೇ ಗ್ರಾ.ಪಂ. ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಪಕ್ಷೇತರ ಅಭ್ಯರ್ಥಿ ಹೃದಯಾಘಾತದಿಂದ ನಿಧನ

28/02/2021

ಶಿರ್ವ: ಸತತ ಐದನೇ ಬಾರಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿ, ಈ ಬಾರಿ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದ ನೂತನ ಗ್ರಾಮ ಪಂಚಾಯತ್ ಅಧ್ಯಕ್ಷರು ಹೃದಯಾಘಾತದಿಂದ ನಿಧನರಾಗಿದ್ದಾರೆ.


Provided by

ಶಿರ್ವ ಗ್ರಾ.ಪಂ. ನೂತನ ಅಧ್ಯಕ್ಷ 55 ವರ್ಷ ವಯಸ್ಸಿನ ಗ್ರೆಗೊರಿ ಕೋನ್ರಾಡ್ ಕ್ಯಾಸ್ತಲೀನೋ ನಿಧನರಾದರಾಗಿದ್ದಾರೆ. ಪಕ್ಷೇತರವಾಗಿ ಸ್ಪರ್ಧಿಸಿದ್ದ ಕ್ಯಾಸ್ತಲೀನೋ, ಬಿಜೆಪಿ ಬೆಂಬಲದೊಂದಿಗೆ ಅಧ್ಯಕ್ಷರಾಗಿದ್ದರು.

ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಕ್ಯಾಸ್ತಲೀನೋ ಅವರು,  ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಮತ್ತು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

whatsapp

ಇತ್ತೀಚಿನ ಸುದ್ದಿ