ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಗೆ ಭರ್ಜರಿ ಗೆಲುವು - Mahanayaka

ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಗೆ ಭರ್ಜರಿ ಗೆಲುವು

sasikanth senthil
04/06/2024


Provided by

ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಸಸಿಕಾಂತ್ ಸೆಂಥಿಲ್, 2 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಸುಮಾರು ಎರಡು ವರ್ಷಗಳಿಗೂ ಹೆಚ್ಚು ಅವಧಿಗೆ ಜಿಲ್ಲಾಧಿಕಾರಿಯಾಗಿ ಸಸಿಕಾಂತ್ ಸೆಂಥಿಲ್ ಸೇವೆ ಸಲ್ಲಿಸಿದ್ದರು. ಬಳಿಕ ಸ್ವಯಂ ನಿವೃತ್ತಿ ಪಡೆದಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ವೇಳೆ ದಕ್ಷ ಜಿಲ್ಲಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಇದೀಗ ವಿಜಯದ ನಗೆ ಬೀರಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ