ಎರಡು ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ವಿಜಯ: ಯಾವ ಕ್ಷೇತ್ರವನ್ನು ಉಳಿಸ್ತಾರೆ.? ತೊರೆಯುತ್ತಾರೆ..? - Mahanayaka

ಎರಡು ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ವಿಜಯ: ಯಾವ ಕ್ಷೇತ್ರವನ್ನು ಉಳಿಸ್ತಾರೆ.? ತೊರೆಯುತ್ತಾರೆ..?

05/06/2024


Provided by

ತಾನು ಸ್ಪರ್ಧಿಸಿದ್ದ ವಯನಾಡ್ ಮತ್ತು ರಾಯಬರೇಲ್ವಿ ಎರಡು ಕ್ಷೇತ್ರಗಳಲ್ಲೂ ರಾಹುಲ್ ಗಾಂಧಿ ಭಾರೀ ಅಂತರದಿಂದ ಜಯ ಗಳಿಸಿದ್ದು ಇದೀಗ ಅವರು ಯಾವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ ಮತ್ತು ಯಾವುದನ್ನು ತೊರೆಯುತ್ತಾರೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ವಯನಾಡು ಕ್ಷೇತ್ರವನ್ನು ತೊರೆದು ರಾಯ್ ಬರೇಲ್ವಿಯನ್ನು ರಾಹುಲ್ ಗಾಂಧಿ ಉಳಿಸಿಕೊಳ್ಳುವುದಾದರೆ ವಯನಾಡಿನಿಂದ ಪ್ರಿಯಾಂಕ ಗಾಂಧಿಯನ್ನು ಸ್ಪರ್ಧೆಗೆ ಇಳಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರಾಯ್ ಬರೆಲ್ವಿಯಲ್ಲಿ 3,90,000 ಕ್ಕಿಂತಲೂ ಅಧಿಕ ಮತಗಳಿಂದ ಗೆದ್ದಿರುವ ರಾಹುಲ್ ಗಾಂಧಿ ವಯನಾಡಿನಲ್ಲಿ ಮೂರು ಲಕ್ಷದ ಅರವತ್ತು ಸಾವಿರಕ್ಕಿಂತಲೂ ಅಧಿಕ ಮತಗಳಿಂದ ಗೆದ್ದಿದ್ದಾರೆ. ರಾಹುಲ್ ಗಾಂಧಿ ಉತ್ತರ ಪ್ರದೇಶ ಮತ್ತು ಕೇರಳದಲ್ಲಿ ಸ್ಪರ್ಧಿಸಿರುವುದರಿಂದ ಅದು ಇಡೀ ರಾಜ್ಯದ ಚುನಾವಣೆಯ ಮೇಲೆ ಕಾಂಗ್ರೆಸ್ಸಿನ ಪಾಲಿಗೆ ವರದಾನವಾಗಿ ಪರಿಣಮಿಸಿದೆ ಎಂದು ಹೇಳಲಾಗುತ್ತಿದೆ. ಇನ್ನು ರಾಹುಲ್ ಗಾಂಧಿ ವಯನಾಡ ಕ್ಷೇತ್ರವನ್ನು ತೊರೆಯಲಿದ್ದು ಇಲ್ಲಿ ಪ್ರಿಯಾಂಕಾ ಗಾಂಧಿಯನ್ನು ಅಭ್ಯರ್ಥಿಯಾಗಿ ಕಣಕಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ