ದಕ್ಷಿಣ ಕನ್ನಡದ ಮಾಜಿ ಡಿಸಿ ಇಂದು ತಮಿಳುನಾಡಿನ ಸಂಸದ: ಸಸಿಕಾಂತ್ ಸೆಂಥಿಲ್ ಗೆಲುವಿನ ರಹಸ್ಯ ಇದು..! - Mahanayaka

ದಕ್ಷಿಣ ಕನ್ನಡದ ಮಾಜಿ ಡಿಸಿ ಇಂದು ತಮಿಳುನಾಡಿನ ಸಂಸದ: ಸಸಿಕಾಂತ್ ಸೆಂಥಿಲ್ ಗೆಲುವಿನ ರಹಸ್ಯ ಇದು..!

05/06/2024


Provided by

ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ನಿರಂತರವಾಗಿ ಪ್ರತಿಭಟಿಸುತ್ತಾ ಬಂದದ್ದ ದ.ಕ. ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಮಿಳುನಾಡಿನ ತಿರುವಳ್ಳೂರ್ ಲೋಕಸಭೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಟ್ಟು ಮತರಾರರಲ್ಲಿ ಶೇ.56ರಷ್ಟು ಮತದಾರರು ಸಸಿಕಾಂತ್ ಪರವಾಗಿ ಮತ ಚಲಾಯಿಸಿದ್ಧಾರೆ.
ಬಿಜೆಪಿ ಅಭ್ಯರ್ಥಿಯನ್ನು 5,72,155 ಮತಗಳ ಅಂತರದಲ್ಲಿ ಸೋಲಿಸಿದ ಸಸಿಕಾಂತ್ ಸೆಂಥಿಲ್ 7,96,956 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಬಾಲಗಣಪತಿ ವಿ 2,24,801 ಮತಗಳನ್ನು ಪಡೆದುಕೊಂಡಿದ್ದಾರೆ.

ಶೇ.15.9ರಷ್ಟು ಮತದಾರರು ಬಿಜೆಪಿಗೆ ಮತ ನೀಡಿದ್ದಾರೆ. ಮೂರನೇ ಸ್ಥಾನದಲ್ಲಿರುವ ಡಿಎಂಡಿಕೆ ಅಭ್ಯರ್ಥಿ ಶೇ.15.8 (2,23,904) ಮತಗಳನ್ನು ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಸಿಎಎ, ಎನ್‌ಆರ್‌ಸಿ ಕಾಯ್ದೆ ವಿರೋಧಿಸಿದ ಸೆಂಥಿಲ್, “ಪ್ರಜಾಪ್ರಭುತ್ವದ ಮೂಲ ಆಧಾರ ಸ್ತಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿವೆ” ಎಂದು ಹೇಳಿ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

“ದೇಶದ ಬಹುತ್ವದ ಏಳಿಗೆಗೆ ಭವಿಷ್ಯದಲ್ಲಿ ಹೆಚ್ಚು ಅಪಾಯ ಇದ್ದಂತೆ ಕಾಣುತ್ತಿದೆ. ಸೇವೆಯಿಂದ ಹೊರಗಿದ್ದು, ಜನರ ಒಳಿತಿಗಾಗಿ ದುಡಿಯುತ್ತೇನೆ” ಎಂದು ತನ್ನ ರಾಜೀನಾಮೆ ಪತ್ರದಲ್ಲಿ ಸೆಂಥಿಲ್ ಹೇಳಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ