KSRTC ಬಸ್‌ - ಬೈಕ್‌ ನಡುವೆ ಭೀಕರ ಅಪಘಾತ: 30 ಅಡಿ ಎತ್ತರಕ್ಕೆ ಹಾರಿ ಬಿದ್ದು ಬೈಕ್‌ ಸವಾರ ಸಾವು - Mahanayaka

KSRTC ಬಸ್‌ – ಬೈಕ್‌ ನಡುವೆ ಭೀಕರ ಅಪಘಾತ: 30 ಅಡಿ ಎತ್ತರಕ್ಕೆ ಹಾರಿ ಬಿದ್ದು ಬೈಕ್‌ ಸವಾರ ಸಾವು

belagavi
08/06/2024


Provided by

ಬೆಳಗಾವಿ:  KSRTC ಬಸ್‌ ಹಾಗೂ ಬೈಕ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಖನಗಾಂವ ಗ್ರಾಮದಲ್ಲಿ ನಡೆದಿದೆ.

ಸುಳೇಬಾವಿ ಗ್ರಾಮದ ವಿಠ್ಠಲ ದತ್ತಾ ಲೋಕರೆ(29)  ಮೃತಪಟ್ಟ ಬೈಕ್ ಸವಾರನಾಗಿದ್ದು ಇಲ್ಲಿನ ಕೆ.ಎಚ್.ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಸ್ ಬೆಳಗಾವಿ ಕಡೆಗೆ ಬರುತ್ತಿತ್ತು. ಈ ವೇಳೆ ಬೈಕ್ ಸವಾರನಿಗೆ ಗುದ್ದಿದೆ. ಪರಿಣಾಮ ಬೈಕ್​ ಸವಾರ 30 ಅಡಿ ಎತ್ತರಕ್ಕೆ ಜಿಗಿದು ಹೊಲದಲ್ಲಿ ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬೈಕ್‌ ಗೆ ಡಿಕ್ಕಿ ಹೊಡೆದ ಬಳಿಕ ಬಸ್‌ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮವಾಗಿ ಬಸ್‌ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ